Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಟ್ಟಡ ಧ್ವಂಸ ಆರೋಪ : ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ಧ ದೂರು
    ಇತ್ತೀಚಿನ ಸುದ್ದಿ

    ಕಟ್ಟಡ ಧ್ವಂಸ ಆರೋಪ : ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ಧ ದೂರು

    February 4, 2025
    Share

    ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

    ಉಜಿರೆ ನಿವಾಸಿ ದಿ| ಜಯಶ್ರೀ ಹೊಳ್ಳ ಅವರ ಪುತ್ರ ವಿಜಯ ರಾಘವೇಂದ್ರ ದೂರು ನೀಡಿದವರು. ಇವರ ಅಜ್ಜ ವಿಷ್ಣಯ್ಯ ಹೊಳ್ಳ ಎಂಬವರಿಗೆ ದೇಗುಲದಿಂದ ಬಾಡಿಗೆಗೆ ನೀಡಿದ ಸ್ಥಳದಲ್ಲಿ ವಿಷ್ಣಯ್ಯ ಹೊಳ್ಳರ ನಿಧನದ ಬಳಿಕ ಪುತ್ರ ಗಣಪತಿ ವಿಷ್ಣು ಹೊಳ್ಳ, ಅವರ ಸಾವಿನ ಬಳಿಕ ಪತ್ನಿ ಶಾರದಮ್ಮನವರು ವಾಸಿಸುತ್ತಿದ್ದರು. ಈ ಮಧ್ಯೆ ಇಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಪುತ್ತೂರು ಪುರಸಭೆಯಿಂದ ಮನೆ ನಂಬರುಗಳನ್ನು ಪಡೆಯಲಾಗಿತ್ತು. 1998-99ರಲ್ಲಿ ಇದನ್ನು ಶಾರದಮ್ಮನವರಿಂದ ದೂರುದಾರರ ತಾಯಿ ಜಯಶ್ರೀ ಹೊಳ್ಳ ಹೆಸರಿಗೆ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಪ್ರಸ್ತುತ ಜಯಶ್ರೀ ನಿಧನರಾಗಿದ್ದು, ಆ ಬಳಿಕ ದೂರುದಾರರು ದೇಗುಲಕ್ಕೆ ಸ್ಥಳ ಬಾಡಿಗೆ ನೀಡುತ್ತಿದ್ದಾರೆ. ಫೆ 3ರಂದು ಶಾಸಕ ಅಶೋಕ್‌ ರೈಯವರ ಚಿತಾವಣೆ ಮೇರೆಗೆ ಈಶ್ವರ್‌ ಭಟ್‌ ಅವರು ತನ್ನ ಸಹಚರರೊಂದಿಗೆ ಜೆಸಿಬಿ ಸಹಾಯದಿಂದ ಧ್ವಂಸ ಮಾಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಕ. ಜಿಲ್ಲಾಧಿಕಾರಿ, ಪೊಲೀಸ್‌ ಉಪ ವಿಭಾಗಾಧಿಕಾರಿ, ಪೊಲೀಸ್‌ ನಿರೀಕ್ಷಕ, ನಗರ ಪೊಲೀಸ್‌ ಉಪನಿರೀಕ್ಷಕ, ನಗರ ಸಭೆ ಪೌರಾಯುಕ್ತ, ರಾಜ್ಯ ಮಾನವ ಹಕ್ಕುಗಳ ಆಯೋಗ, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ ದೂರಿನ ಪ್ರತಿಯನ್ನು ರವಾನಿಸಲಾಗಿದೆ.

    Post Views: 194

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.