Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ ಭೂ ದಾಖಲೆ ಪತ್ರ ಸಲ್ಲಿಸಿ ವಂಚನೆ ಆರೋಪ – ಯೂತ್ ಕಾಂಗ್ರೆಸ್ ಮುಖಂಡ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ಭೂ ದಾಖಲೆ ಪತ್ರ ಸಲ್ಲಿಸಿ ವಂಚನೆ ಆರೋಪ – ಯೂತ್ ಕಾಂಗ್ರೆಸ್ ಮುಖಂಡ ಸೆರೆ

    October 7, 2023
    Share

    ಮಂಗಳೂರು: ಜಮೀನಿನ ನಕಲಿ ದಾಖಲು ಪತ್ರಗಳನ್ನು ಸಲ್ಲಿಸಿ ಕೆಎಸ್‌ಎಫ್‌ಇಯ ಮಾಲಕಲ್ಲು ಶಾಖೆಯಿಂದ 70 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೊಸದುರ್ಗ ಚಿತ್ತಾರಿ ಪಿ.ವಿ. ರಸ್ತೆಯ ಕೆ.ವಿ.ಹೌಸ್ ನ ಎಂ. ಇಸ್ಮಾಯಿಲ್(37)ನನ್ನು ಗಡಿ ಭಾಗದ ಕಾಸಗೋಡು ಜಿಲ್ಲೆಯ ರಾಜಪುರಂ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಸ್ಮಾಯಿಲ್ ಸಹಿತ 8 ಮಂದಿ ವಿರುದ್ಧ ರಾಜಪುರಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಪ್ಪಳ ಗ್ರಾಮದ ಐದು ಎಕ್ರೆ ಜಮೀನಿನ ದಾಖಲು ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಅದಕ್ಕೆ ಗ್ರಾಮಾಧಿಕಾರಿಯ ಡಿಜಿಟಲ್‌ ಸಹಿಹಾಕಿ ನೀಡಿ ಕೆಎಸ್‌ಎಫ್‌ಇ ಚಿಟ್ ಫಂಡ್‌ನಿಂದ ಆರೋಪಿಗಳು 70 ಲಕ್ಷರೂ. ಸಾಲ ಪಡೆದು ವಂಚಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಸಾಲವನ್ನು ಮರುಪಾವತಿಸದೆ ಇದ್ದಾಗ ಆರೋಪಿಗಳು ಸಲ್ಲಿಸಿದ ಭೂದಾಖಲು ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು ನಕಲಿ ಎಂಬುದು ತಿಳಿದು ಬಂದಿದೆ ಎಂದು ಕೆಎಸ್‌ಎಫ್‌ಇಯ ಶಾಖಾ ಮೆನೇಜರ್ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಪೊಲೀಸರು ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದು ಇತರ ಆರೋಪಿಗಳ ಬಂಧನಕ್ಕೆ ಶೋಧ ನಡೆಯುತ್ತಿದೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 224

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.