Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿಯ ಸಾವು, ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿಯ ಸಾವು, ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ

    May 11, 2026
    Share

    ಚಿಕ್ಕಬಳ್ಳಾಪುರ:  ಸರ್ಕಾರಿ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರ ವರದಿಯಾಗಿದೆ.

    ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬುದು ಕುಟುಂಬಸ್ಥರ ಗಂಭೀರ ಆರೋಪವಾಗಿದೆ. ಈ ಎಡವಟ್ಟಿನಿಂದಾಗಿ ದೇಹದಾದ್ಯಂತ ಸೋಂಕು ಹರಡಿ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

    ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನ್ಯಾಯ ಕೋರಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    ಆರೋಪದ ಕುರಿತು ಪ್ರತಿಕ್ರಿಯಿಸಿರುವ ವೈದ್ಯರು  “ಶಸ್ತ್ರಚಿಕಿತ್ಸೆ ವೇಳೆ ಕರಳು ಅಂಟಿಕೊಂಡಿದ್ದರಿಂದ ಸಣ್ಣ ಪ್ರಮಾಣದ ಹಾನಿಯಾಗಿತ್ತು. ತಕ್ಷಣವೇ ಹಿರಿಯ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲಾಗಿತ್ತು. ಮೂರು ದಿನಗಳ ಹಿಂದೆಯೇ ಅವರು ಗುಣಮುಖರಾಗಿ ಮನೆಗೆ ತೆರಳಿದ್ದರು. ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಲಿದೆ” ಎಂದಿದ್ದಾರೆ.

    Post Views: 142

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.