ಉಡುಪಿ: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳವನ್ನು ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಳ್ವಾಸ್ ಪ್ರಗತಿ-2025ರಲ್ಲಿ ವಿವಿಧ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದರು.
ಯಾವುದೇ ಕೋರ್ಸಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವ ವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ-3012, ಐಟಿಐ ಹಾಗೂ ಡಿಪ್ಲೋಮಾ- 4350, ಯಾವುದೇ ಪದವಿ- 3847, ಬಿಇ/ಬಿಟೆಕ್- 805, ಕೋರ್ ಐಟಿ- 119, ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್- 709, ಯಾವುದೇ ಸ್ನಾತಕೋತ್ತರ/ಎಂಬಿಎ- 1446, ಬಿಕಾಂ ಹಾಗೂ ಬಿಬಿಎ- 1176, ಗಲ್ಫ್ ರಾಷ್ಟ್ರ-316 ಉದ್ಯೋಗದ ಅವಕಾಶಗಳು ಇರಲಿದೆ ಎಂದು ಮಾಹಿತಿ ನೀಡಿದರು.




