Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್
    ಇತ್ತೀಚಿನ ಸುದ್ದಿ

    ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

    April 25, 2025
    Share

    ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ.

    ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.

    ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡೆಯಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರು ಆಗಲಿ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಆತ್ಮಗಳಿಗೆ ಶಾಂತಿ ಕೋರುತ್ತೇವೆ ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ.

    Post Views: 187

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.