ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಉಡುಪಿ ಶಾಸಕರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಪ್ರಕರಣ ನಡೆದಾಗ ನಾನು ಅಧಿವೇಶನದಲ್ಲಿದ್ದೆ, ಕೃತ್ಯ ಎಸಗಿದ ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈ ಮೂವರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರಿಂದ ಜಿಲ್ಲೆಯ ಜನತೆಗೆ ಅಪಮಾನವಾಗಿದೆ. ಈ ರೀತಿಯ ಹುಡುಗಾಟಿಕೆ ಮಾಡುವುದು ಸರಿಯಲ್ಲ.ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಈ ಘಟನೆಯ ಬಗ್ಗೆ ನನಗೆ ಸಂಶಯ ಇದೆ. ಟಾಯ್ಲೆಟ್ ನಲ್ಲಿ ವಿಡಿಯೋ ಕ್ಯಾಮೆರಾ ಇಟ್ಟಿರುವುದು ಸರಿಯಲ್ಲ. ಇದರಲ್ಲಿ ಬ್ಲಾಕ್ ಮೇಲ್ ಮಾಡುವ ಷಡ್ಯಂತ್ರ ಇರಬಹುದು. ಮೂರು ಯುವತಿಯರ ಬಗ್ಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತೇನೆ. ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳ ಗಮನಕ್ಕೂ ತರುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.