Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ನಾಪತ್ತೆಯಾಗಿದ್ದ ಬಾಲಕಿ ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಖಾದರ್ ರಿಂದ ಸನ್ಮಾನ
    ಇತ್ತೀಚಿನ ಸುದ್ದಿ

    ಸುಳ್ಯ: ನಾಪತ್ತೆಯಾಗಿದ್ದ ಬಾಲಕಿ ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಖಾದರ್ ರಿಂದ ಸನ್ಮಾನ

    February 12, 2024
    Share

    ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು‌ ಸಹಕರಿಸಿದ ಮಂಗಳೂರಿನ ಮೂವರು ಪತ್ರಕರ್ತರನ್ನು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಶನಿವಾರ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರದಲ್ಲಿ ಜರುಗಿದ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದಲ್ಲಿ ಸನ್ಮಾನಿಸಿದರು. ಸುಳ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಸುಳ್ಯದಲ್ಲಿ ನಡೆದ ಪತ್ರಕರ್ತರ ಐದನೇ ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿದ ಸ್ಪೀಕರ್ ಯು.ಟಿ. ಖಾದರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್ ಹಾಗೂ ಗಿರೀಶ್ ಮಳಲಿ ಅವರನ್ನು ಸನ್ಮಾನಿಸಿದರು. ಜೋಯಿಡಾಕ್ಕೆ ಚಾರಣಕ್ಕೆ ಹೊರಟಿದ್ದ ಮಂಗಳೂರಿನ ಪತ್ರಕರ್ತರು ಮೂಲ್ಕಿ ಬಸ್‌ ಸ್ಟ್ಯಾಂಡ್‌ ನಲ್ಲಿ ನಿಂತಿದ್ದಾಗ ಮಗಳು ನಾಪತ್ತೆಯಾಗಿದ್ದಾರೆಂದು ಬಾಗಲಕೋಟ ಮೂಲದ ಕೂಲಿ ಕಾರ್ಮಿಕರೊಬ್ಬರು ಸಾರ್ವಜನಿಕರಲ್ಲಿ ಗೋಗರೆದು ಕಣ್ಣೀರು ಹಾಕುತ್ತಿದ್ದರು. ಇದನ್ನು ಗಮನಿಸಿದ ಪತ್ರಕರ್ತರು ಪ್ರಕರಣದ ಗಂಭೀರತೆ ಅರಿತು ಬಾಲಕಿ ಕೆಎಸ್‌ ಆರ್ ಟಿಸಿ ಬಸ್‌ ನಲ್ಲಿ ತೆರಳಿರುವ ಸುಳಿವಿನ ಆಧಾರದಲ್ಲಿ ಉಡುಪಿ ಎಸ್‌ಪಿ ಡಾ.ಅರುಣ್ ಕೆ. ಅವರ ಸಹಕಾರದಲ್ಲಿ ಉಡುಪಿ ಸಮೀಪ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು ನೆರವಾಗಿದ್ದರು. ಬಳಿಕ ಬಾಲಕಿಯ ಹೆತ್ತವರನ್ನು ತಮ್ಮ ಕಾರಲ್ಲಿ ಕರೆದೊಯ್ದು ಉಡುಪಿ ಸರಕಾರಿ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಅವರ ವಶಕ್ಕೆ ಒಪ್ಪಿಸಿದರು. ಈ ಕ್ರಮಕ್ಕೆ ಉಡುಪಿ ಕೆ ಎಸ್ ಆರ್ ಟಿಸಿ ಕಂಟ್ರೋಲರ್ ರಾಮ್, ಉಡುಪಿ ಎಸ್ಪಿ ಡಾ.ಅರುಣ್ ಶ್ಲಾಘನೆ ವ್ಯಕ್ತಪಡಿಸಿದ್ದರು.

    Post Views: 217

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.