Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನ
    ಇತ್ತೀಚಿನ ಸುದ್ದಿ

    BREAKING NEWS : ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನ

    October 23, 2022
    Share

    ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

    ತೀವ್ರ ಅನಾರೋಒಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.

    ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ (ಪಂಚಮಸಾಲಿ) ಸಮುದಾಯಕ್ಕೆ ಸೇರಿದ ಇವರು ಸವದತ್ತಿಯ ಗೌರವಕುಟುಂಬಕ್ಕೆ ಸೇರಿದವರು.

    2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

    Post Views: 243

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.