ಪುತ್ತೂರು: ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮೂರನೇ ಆರೋಪಿಯನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಳ್ಳಲಾಗಿದ್ದು, ಆತ ಬೆಳ್ಳಾರೆ ಮೂಲದವನು ಎಂಬ ಮಾಹಿತಿ ಇದೆ.ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.