Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಗೃಹ ಸಚಿವ ಡಾ. ಜಿ ಪರಮೇಶ್ವರ್
    ಇತ್ತೀಚಿನ ಸುದ್ದಿ

    ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಗೃಹ ಸಚಿವ ಡಾ. ಜಿ ಪರಮೇಶ್ವರ್

    May 3, 2025
    Share

    ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು.

    ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬAಧಪಟ್ಟAತೆ ಈಗಾಗಲೇ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ  ಆ್ಯಂಟಿ  ಕಮ್ಯೂನಲ್ ಟಾಸ್ಕ್ ಫೋರ್ಸ್ ಮಂದಿರ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು.

    ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಗೃಹಸಚಿವರು ಭರವಸೆ ನೀಡಿದರು. 

    Post Views: 162

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.