ಸುಳ್ಯ : ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಇತ್ತೀಚೆಗೆ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ.
ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.