Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರೇ ಗಮನಿಸಿ : ಮೊಬೈಲ್ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
    ಇತ್ತೀಚಿನ ಸುದ್ದಿ

    ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರೇ ಗಮನಿಸಿ : ಮೊಬೈಲ್ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

    July 24, 2024
    Share

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

    ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ

    ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

    ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 154

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.