Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026
    Share

    ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಮಾತಿನ ವೀಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಎರಡು ಬಣಗಳಾಗಿ ವಿಂಗಡಣೆಯಾಗಿದ್ದು, ಪರ ಮತ್ತು ವಿರೋಧದ ಅಲೆ ಎದ್ದಿದೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅರವಿಂದ್ ಬೋಳಾರ್ ಅವರು, ತಮ್ಮ ವೃತ್ತಿಜೀವನದಲ್ಲಿ ಮುಸ್ಲಿಂ ಸಮುದಾಯದ ಪಾತ್ರಗಳನ್ನು ನಿರ್ವಹಿಸಿದ ಬಗ್ಗೆ ಮೆಲುಕು ಹಾಕಿದ್ದರು. ಈ ಸಂದರ್ಭದಲ್ಲಿ ಅವರು, ನನಗೆ ಮುಸ್ಲಿಮರೇ ಮೊದಲು. ನನ್ನನ್ನು ಅತೀ ಹೆಚ್ಚು ಇಷ್ಟಪಟ್ಟಿದ್ದೇ ಮುಸ್ಲಿಂ ಸಮುದಾಯದವರು. ಯಾವುದೇ ವೇದಿಕೆಯಲ್ಲೂ ನಾನು ಇದನ್ನೇ ಹೇಳುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈ ಮಾತುಗಳೇ ಈಗ ವಿವಾದದ ಕಿಚ್ಚು ಹಚ್ಚಲು ಕಾರಣವಾಗಿದೆ.

    ಅರವಿಂದ್ ಬೋಳಾರ್ ಅವರ ಈ ಹೇಳಿಕೆಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಒಬ್ಬ ಕಲಾವಿದನಿಗೆ ಯಾವುದೇ ಧರ್ಮ ಅಥವಾ ಜಾತಿಯ ಹಂಗಿರುವುದಿಲ್ಲ. ಸಾರ್ವಜನಿಕವಾಗಿ ಬೆಳೆದು ನಿಂತ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಮಾತ್ರ ಉಲ್ಲೇಖಿಸಿ ಅವರೇ ಮೊದಲು ಎಂದು ಹೇಳುವುದು ಒಬ್ಬ ಕಲಾವಿದನಿಗೆ ಶೋಭೆ ತರುವುದಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೆ, ವೈರಲ್ ವೀಡಿಯೋ ನೋಡಿದ ಕೆಲವು ಅಭಿಮಾನಿಗಳು ನೇರವಾಗಿ ಅರವಿಂದ್ ಬೋಳಾರ್ ಅವರಿಗೆ ಕರೆ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

    ವಿವಾದ ಒಂದು ಕಡೆಯಾದರೆ, ಮತ್ತೊಂದೆಡೆ ಅರವಿಂದ್ ಬೋಳಾರ್ ಅವರ ಪರವಾಗಿಯೂ ಅನೇಕರು ಧ್ವನಿ ಎತ್ತಿದ್ದಾರೆ. ಬೋಳಾರ್ ಅವರು ಕರಾವಳಿಯ ಸೌಹಾರ್ದತೆಯ ಸಂಕೇತವಾಗಿ ಈ ಮಾತುಗಳನ್ನು ಆಡಿದ್ದಾರೆ. ತಮಗೆ ಸಿಕ್ಕ ಪ್ರೀತಿಯನ್ನು ಸ್ಮರಿಸುವುದು ತಪ್ಪಲ್ಲ. ಅವರು ಯಾವುದೇ ಧರ್ಮವನ್ನು ಕೀಳಾಗಿ ಕಂಡಿಲ್ಲ ಅಥವಾ ಇತರ ಧರ್ಮದ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ. ಅವರ ಮಾತನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಬೆಂಬಲಿಗರು ವಾದಿಸುತ್ತಿದ್ದಾರೆ.

    Post Views: 1

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.