ಮೂಡುಬಿದಿರೆ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ಆಕಾಶ್ ಕಲ್ಕಿ ಹಾಗೂ ವೀರೇಂದ್ರ ಬಂಧಿತ ಆರೋಪಿಗಳು.ಬಂಧಿತರು ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ. ಜಿಲ್ಲೆಯ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿದ್ದು, ಆರೋಪಿಗಳಿಂದ ಒಟ್ಟು ಅಂದಾಜು 1.8 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಅ.27 ರ ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ವಾಹನ ನಿಲ್ಲಿಸಲು ಹೇಳಿದಾಗ ವಾಹನ ನಿಲ್ಲಿಸದೇ ಹಿಂತಿರುಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಒಂದು ಬೈಕ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಖಾಸಗಿ ಕಾಲೇಜಿನ ಎದುರು ಇರುವ ಅಪಾರ್ಟ್ಮೆಂಟ್ ಒಂದರ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ.