Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ-ಸುಧೀರ್ ಕುಮಾರ್ ರೆಡ್ಡಿ ಮಾಹಿತಿ
    ಇತ್ತೀಚಿನ ಸುದ್ದಿ

    ಮಂಗಳೂರು: ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ-ಸುಧೀರ್ ಕುಮಾರ್ ರೆಡ್ಡಿ ಮಾಹಿತಿ

    March 30, 2026
    Share

    ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

    “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಭಾಗಿಯಾಗಿರುವುದನ್ನು ಪತ್ತೆಹಚ್ಚಿವೆ. ಅಪರಾಧ ಎಸಗಲು ಅಥವಾ ಆರೋಪಿಗಳು ತಪ್ಪಿಸಿಕೊಳ್ಳಲು ಮತ್ತು ಅಡಗಿಕೊಳ್ಳಲು ಸಹಾಯ ಮಾಡಿದ ಶಂಕೆಯಿರುವ ವ್ಯಕ್ತಿಗಳನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ. ಅವರ ಪಾತ್ರ ದೃಢಪಟ್ಟಲ್ಲಿ, ಅವರನ್ನೂ ಸಹ ಬಂಧಿಸಲಾಗುವುದು” ಎಂದು ತಿಳಿಸಿದರು.”ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 249(a) ಅಡಿಯಲ್ಲಿ ಶಿಕ್ಷೆಗೆ ಅರ್ಹರಾಗಿರುತ್ತಾರೆ. ಈ ಹಿಂದಿನಂತೆಯೇ, ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

    Post Views: 146

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.