ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನರು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯನ್ನು ಸದಾಶಿವ ಎಂದು ಗುರುತಿಲಾಗಿದೆ. ಸದಾಶಿವ ಅವರು ಬುಧವಾರ ಮಧ್ಯಾಹ್ನ ಬಂಟ್ವಾಳ ಸಂಚಾರ ಠಾಣೆಯ ಎಎಸ್ಸೈ ಅವರೊಂದಿಗೆ ನೇರಳಕಟ್ಟೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಓಮ್ಮಿ ಕಾರನ್ನು ತಪಾಸಣೆಯ ಸಲುವಾಗಿ ನಿಲ್ಲಿಸಲು ಸೂಚನೆ ನೀಡಿದರೂ, ಒಮ್ಮಿ ಕಾರಿನ ಚಾಲಕ ರಾಧಾಕೃಷ್ಣ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು, ಸದಾಶಿವ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಸದಾಶಿವ ಅವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.