Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ತೀವ್ರ ರಕ್ತದೊತ್ತಡದಿಂದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ನಿಧನ..!
    ಇತ್ತೀಚಿನ ಸುದ್ದಿ

    ಮಂಗಳೂರು : ತೀವ್ರ ರಕ್ತದೊತ್ತಡದಿಂದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ನಿಧನ..!

    February 3, 2026
    Share

    ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ಅವರು ತೀವ್ರ ರಕ್ತದೊತ್ತಡದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

    ಮಾರುತಿ ಲಮಾಣಿ ಅವರು ಕಳೆದ ಆರು ವರ್ಷಗಳಿಂದ ಮಂಗಳೂರು ನಗರದ ಸಶಸ್ತ್ರ ನಗರ ಮೀಸಲು ಪಡೆ (ಸಿಎಆರ್)ಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಿನ ಅವಧಿಗೆ ಕರ್ತವ್ಯ ನಿರ್ವಹಿಸಿದ್ದರು.

    ಎರಡು ದಿನಗಳ ಹಿಂದೆ ರಾತ್ರಿ ಪಾಳೆಯ ಕರ್ತವ್ಯ ಮುಗಿಸಿ ಬಿಕರ್ನಕಟ್ಟೆಯಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾದ ಅವರು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆದಿದ್ದರು. ನಂತರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮನೆಯವರು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ತೀವ್ರ ರಕ್ತದೊತ್ತಡ ಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

    2016ನೇ ಬ್ಯಾಚ್‌ನ ಪೊಲೀಸ್ ಸಿಬ್ಬಂದಿಯಾಗಿದ್ದ ಮಾರುತಿ ಲಮಾಣಿ ಅವರ ಪತ್ನಿಯೂ ಪೊಲೀಸ್ ಸಿಬ್ಬಂದಿಯಾಗಿದ್ದು, ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

    Post Views: 113

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.