Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 145 ಬೋಟುಗಳಲ್ಲಿ ಕೋಟಿ ಕಂಠ ಗಾಯನ
    ಇತ್ತೀಚಿನ ಸುದ್ದಿ

    ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 145 ಬೋಟುಗಳಲ್ಲಿ ಕೋಟಿ ಕಂಠ ಗಾಯನ

    October 28, 2022
    Share

    ಉಡುಪಿ:ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾದರು.

    ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 145 ಬೋಟು ಗಳಲ್ಲಿ 4000 ಕ್ಕೂ ಅಧಿಕ ಮೀನುಗಾರರು ಪರ್ಸಿನ್ ಬೋಟುಗಳ ತೆರಳಿ ಕನ್ನಡ ಗೀತೆಗಳ ಗಾಯನ ಕಾಯಕ್ರಮದಲ್ಲಿ ಭಾಗಿಯದರು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಉಡುಪಿ ಮತ್ತು ದ.ಕನ್ನಡ ಮೀನು ಮಾರಾಟ ಫೆಡರೇಷನ್ ಆಧ್ಯಕ್ಷ ಯಶ್ ಪಾಲ್ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಖೇ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು , ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳು ಕನ್ನಡ ಬಾವುಟದಿಂದ ಅಲಂಕರಿಸಿದ ಬೋಟ್ ನಲ್ಲಿ ಸಂಗೀತ ಕಲಾವಿದರೊಂದಿಗೆ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಜಿಲ್ಲಾಧಿಕಾರಿಗಳು ಕನ್ನಡ ಗೀತೆಗಳಿಗೆ ನೃತ್ಯ ಮಾಡಿ ಸಂಭ್ರಮಿಸಿದರು.ಮಣಿಪಾಲ ಗ್ರೀನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 5000 ಕ್ಕೂ ಮಂದಿ ಡಾಕ್ಟರ್‌ಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಬಿಳಿ ಕೋಟ್ ಹಾಗೂ ಸ್ಕೆತೋಸ್ಕೋಪ್ ಧರಿಸಿ ಭಾಗವಹಿಸಿದ್ದು, ಶಾಸಕ ರಘುಪತಿ ಭಟ್ ಭಾಗವಹಿಸಿದ್ದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಬ್ಯಾಂಡ್‌ನೊAದಿಗೆ 5000 ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲೀಡ್ ಕಾಲೇಜು ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಯುವ ಸಬಲೀಖರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ 3000 ಮಂದಿ ಕಾರ್ಮಿಕರೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಅಪರ ಜಿಲ್ಲಾದಿಕಾರಿ ವೀಣಾ ಬಿ.ಎನ್. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊAದಿಗೆ ಭಾಗವಹಿಸಿದ್ದರು.

    ಉಡುಪಿ ನಗರಸಭೆಯಿಂದ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭೆಯ ಸದಸ್ಯರುಗಳು, ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ , ನಗರಸಭೆಯ ಸಿಬ್ಬಂದಿ ಭಾಗವಹಿಸಿದ್ದರು.

    ನಿಟ್ಟೆ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೀಡನಗುಡ್ಡೆಯ ಮಹಾತ್ಮಗಾಂಧೀ ಬಯಲು ರಂಗ ಮಂದಿರಲ್ಲಿ ಕಟ್ಟಡ ಕಾರ್ಮಿಕರು, ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂ¨ ಕಲ್ಯಾಣ ಇಲಾಖೆ, ನಿಟ್ಟೂರಿನ ಸರ್ಕಾರಿ ರಾಜ್ಯ ಮಹಿಳಾ ನಿಲಯ, ಕಾರ್ಕಳದ ಅತ್ತೂರು ಚರ್ಚ್, ಚತುರ್ಮುಖ ಬಸದಿ, ಗೊಮ್ಮಟಬೆಟ್ಟ, ಆನೆಕೆರೆ ಬಸದಿ, ವರಂಗ ಬಸದಿ, ಕಾಪು ಜೂನಿಯರ್ ಕಾಲೇಜು ಮೈದಾನ, ಬಂಟಕಲ್ ಇಂಜಿನಿಯರ್ ಕಾಲೇಜು , ಕುಂದಾಪುರ ಜೂನಿಯರ್ ಕಾಲೇಜು ಮೈದಾನ, ಬೈಂದೂರು ಗಾಂಧೀ ಮೈದಾನ, ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಗ್ರಂಥಾಲಯಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ರೈಲ್ವೆ ನಿಲ್ದಾಣ, ಆಟೋ ನಿಲ್ದಾಣ, ಬಸ್ ನಿಲ್ದಾಣ, ಧಾರ್ಮಿಕ ಕೇಂದ್ರಗಳಲ್ಲಿ, ಬ್ಯಾಂಕ್ , ಎಲ್.ಐ.ಸಿ ಕಚೇರಿಗಳಲ್ಲಿ ಕೋಟಿ ಕಂಠ ಗಾಯನ ನಡೆಯಿತು.ಕೋಟಿಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂನತ ವಿದ್ಯಾ ಚೇತನ,ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳ ಗಾಯನ ಹಾಗೂ ಕನ್ನಡ ಭಾಷೆಯನ್ನು ಉಳಿಸಿ ಬೆಳಸುವ ಕುರಿತು ಸಂಕಲ್ಪ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

    Post Views: 185

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.