Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ-ಕಲ್ಲಡ್ಕ ಟಿಕ್ಕ ಪಾಯಿಂಟ್ ಮಾಲಿಕನ ಬಂಧನ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ-ಕಲ್ಲಡ್ಕ ಟಿಕ್ಕ ಪಾಯಿಂಟ್ ಮಾಲಿಕನ ಬಂಧನ..!

    October 6, 2022
    Share

    ಬಂಟ್ವಾಳ: ಕೋಳಿ ಟಿಕ್ಕ ಪಾರ್ಸೆಲ್ ಪಡೆಯಲು ಟಿಕ್ಕ ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

    ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ ಪಾಯಿಂಟ್ ಮಾಲಕ ಮಹಮ್ಮದ್ ಆಶ್ರಫ್ ಎಂಬಾತ ಪ್ರಕರಣದ ಆರೋಪಿ. ಕಲ್ಲಡ್ಕದಲ್ಲಿರುವ ಟಿಕ್ಕಪಾಯಿಂಟ್ ಗೆ ಪಾರ್ಸೆಲ್ ತರಲು ರಾತ್ರಿ ಸುಮಾರು 8 ಗಂಟೆಗೆ ಬಂದ ವೇಳೆ ಆರೋಪಿ ಕೃತ್ಯ ಎಸಗಿದ್ದಾನೆ. ಬಾಲಕ ಟಿಕ್ಕ ಪಾರ್ಸೆಲ್ ಕೇಳಿದಾಗ, ಟಿಕ್ಕ ಪಾರ್ಸೆಲ್ ಕೊಂಡುಹೋಗಲು ಪ್ಲಾಸ್ಟಿಕ್ ಚೀಲವನ್ನು ತರುವಂತೆ ಅಂಗಡಿಯ ಒಳಗೆ ಬರುವಂತೆ ಹೇಳಿ, ಆತ ಪ್ಲಾಸ್ಟಿಕ್ ಚೀಲ ತರಲು ಒಳಗೆ ಹೋದ ವೇಳೆ ಆರೋಪಿ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಬಾಲಕನ ಮೇಲೆ ಹಲ್ಲೆ ಅತ್ಯಾಚಾರ ನಡೆಸಿದ ಆರೋಪಿ ಘಟನೆ ನಡೆದು ಎರಡು ತಿಂಗಳ ಬಳಿಕ ಮತ್ತೆ ಅತ್ಯಾಚಾರಕ್ಕೆ ಯತ್ನ ಮಾಡಿ, ಆತ ವಿರೋಧ ವ್ಯಕ್ತಪಡಿಸಿದಾಗ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬಾಲಕ ಆ. 4 ರಂದು ಮನೆಯಿಂದ ಕಲ್ಲಡ್ಕ ಪೇಟೆಗೆ ಹಾಲು ತರಲೆಂದು ಅಂಗಡಿ ಹೋಗಿ ವಾಪಾಸಾಗುವಾಗ ಎದುರಿನಿಂದ ಬಂದ ಆರೋಪಿ ಈತನನ್ನು ಬರುವಂತೆ ಒತ್ತಾಯಿಸದ್ದಾನೆ. ನಾನು ಬರುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಬಾಲಕ ತಪ್ಪಿಸಿಕೊಂಡು ಮನೆಗೆ ಹೋಗಿ ವಿಚಾರ ತಿಳಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪೋಲಿಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

    Post Views: 169

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.