Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ : ಶಾಲಾ ಆವರಣದಲ್ಲಿ ಕೊಲೆ ಪ್ರಕರಣ – ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ : ಶಾಲಾ ಆವರಣದಲ್ಲಿ ಕೊಲೆ ಪ್ರಕರಣ – ಆರೋಪಿ ಬಂಧನ

    June 19, 2024
    Share

    ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ರವಿವಾರ ರಾತ್ರಿ ಕಾಂತಮಂಗಲಕ್ಕೆ ಆಟೋದಲ್ಲಿ ಬಂದು ಶಾಲಾ ಜಗಲಿಯಲ್ಲಿ ವಸಂತ ಮಲಗಿದ್ದ. ವಸಂತ ಬಳಿ 800 ರೂ. ಹಣ ಇರುವುದನ್ನು ಗಮನಿಸಿದ್ದ ಉದಯ, ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಹಣ ಹಾಗೂ ಮೊಬೈಲ್‌ನೊಂದಿಗೆ ಪರಾರಿಯಾಗಿದ್ದನು. ತನಿಖೆಗಿಳಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಸ್.ಪಿ.ರಿಷ್ಯಂತ್ ಸಿ.ಬಿ., ಎ.ಎಸ್.ಪಿ. ರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ನೇತೃತ್ವದಲ್ಲಿ ಕೊಲೆ ಪ್ರಕರಣ ಭೇದಿಸಲಾಗಿದೆ.

    Post Views: 149

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.