Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದೂರು ನೀಡಲು ಬಂದವನೇ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ದೂರು ನೀಡಲು ಬಂದವನೇ ಅರೆಸ್ಟ್

    February 13, 2026
    Share

    ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಲ್ಯಾಂಡ್‌ ಲಿಂಕ್ಸ್‌ನಲ್ಲಿ  ವಾಸವಿರುವ  ಮಂಜಪ್ಪ ಸುರೇಂದ್ರನ್ ಬಂಧನಕ್ಕೊಳಗಾದ ವ್ಯಕ್ತಿ. ಮನೆಯ ಅಂಗಳದಲ್ಲಿ ಶಟಲ್ ಆಡುತ್ತಿದ್ದ ಯುವಕರ  ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಮತ್ತೆ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಕಾವೂರು ಪೊಲೀಸ್ ಠಾಣೆಗೆ ಹೋದವರು ಅಲ್ಲಿ ಪೊಲೀಸರಿಗೆ ನಿಂಧಿಸಿದ್ದಾನೆ. ಈ ಹಿನ್ನಲೆ   ಮಂಜಪ್ಪ ಸುರೇಂದ್ರನ್ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ಮಂಗಳೂರಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ಈ ಘಟನೆ ನಡೆದಿರುವುದು ಮಂಗಳೂರಿನ ಲ್ಯಾಂಡ್‌ ಲಿಂಕ್ಸ್‌ ಗ್ರೀನ್‌ ಪಾರ್ಕ್‌ನಲ್ಲಿ. ಸಂಜೆ ಹೊತ್ತು ಯುವಕರು ತಮ್ಮ ಪಾಡಿಗೆ ಶಟಲ್ ಆಡುತ್ತಿದ್ದಾಗ, ತನಗೆ ನಿದ್ರೆ ಮಾಡಲು ತೊಂದರೆ ಆಗುತ್ತಿದೆ ಎಂದು ಬೊಬ್ಬೆ ಹಾಕಿ ಪತ್ನಿಯ ಜೊತೆಗೆ ಕಾವೂರು ಪೊಲೀಸ್ ಠಾಣೆಗೆ ಧಾವಿಸಿದ್ದರು. ಅಲ್ಲಿ ತನ್ನ ದೂರನ್ನು ದಾಖಲಿಸಬೇಕು, ದೂರನ್ನು ಸ್ವೀಕರಿಸದಿದ್ದರೆ ಪೊಲೀಸ್ ಕಮಿಷನರ್‌ ಅವರ ಬಳಿ ಹೋಗುವೆ ಎಂದು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ. ಆತನ ಕುಡಿತದ ಮತ್ತಿನಲ್ಲಿ ಇರುವುದನ್ನು ಪೊಲೀಸರು ಗಮನಿಸಿದ್ದಾರೆ.

    ಪೊಲೀಸರು ಬಳಿಕ ಮಂಜಪ್ಪ ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆತನ ಪತ್ನಿಯನ್ನು ಪೊಲೀಸ್ ಜೀಪಿನಲ್ಲಿ ಮನೆಗೆ ಸುರಕ್ಷಿತವಾಗಿ ಮನೆಗೆ ಬಿಟ್ಟಿರುತ್ತಾರೆ. ಈ ಮಧ್ಯೆ, ವಶದಲ್ಲಿ ಇದ್ದ ಆರೋಪಿ ಮಂಜಪ್ಪ ಸುರೇಂದ್ರನ್ ಪೊಲೀಸರಿಗೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. “ನೀವು ಹಣ ಕೊಟ್ಟು ಪೊಲೀಸ್ ಇಲಾಖೆಗೆ ಸೇರಿದ್ದೀರಿ, ನಿಮ್ಮನ್ನು ಇಲಾಖೆಯಲ್ಲಿ ಇಲ್ಲದಂತೆ ಮಾಡುವೆ” ಎಂದು ಸಿಬ್ಬಂದಿಯನ್ನೇ ನಿಂದಿಸಿದ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
    ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ನೆರಕರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತ ಜೈಲು ಪಾಲಾಗಿದ್ದಾನೆ.

    Post Views: 245

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.