Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದ್ಯಾರ್ಥಿನಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ – ವಿವಾಹಿತ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ವಿದ್ಯಾರ್ಥಿನಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ – ವಿವಾಹಿತ ಅರೆಸ್ಟ್

    June 29, 2023
    Share

    ಮಂಗಳೂರು: ವಿದ್ಯಾರ್ಥಿನಿಯೋರ್ವಳನ್ನು ಮದುವೆಯಾಗುವೆನೆಂದು ನಂಬಿಸಿ ಹೊಟೇಲ್ ನಲ್ಲಿರಿಸಿ 20 ದಿನಗಳ ಕಾಲ ನಿರಂತರ ಅತ್ಯಾಚಾರಗೈದ ವಿವಾಹಿತನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕಡಬ ಮೂಲದ ಅನೀಶ್ ರೆಹಮಾನ್ ಬಂಧಿತ ಕಾಮುಕ. ಇನ್ ಸ್ಟಾಗ್ರಾಂ ಮೂಲಕ ವಿದ್ಯಾರ್ಥಿನಿಗೆ ಅನೀಶ್ ರೆಹಮಾನ್ ಪರಿಚಯವಾಗಿದ್ದಾನೆ. ಆರೋಪಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಮಂಗಳೂರಿನ ಪೂಂಜಾ ಇಂಟರ್ ನ್ಯಾಷನಲ್ ಹೊಟೇಲ್ ಗೆ ಕರೆದೊಯ್ದಿದ್ದಾನೆ. ಅಲ್ಲಿ ರೂಂ ಪಡೆದ ಆತ ಮೇ 28 ರಿಂದ ಸುಮಾರು 20 ದಿನಗಳ ಕಾಲ ನಿರಂತರವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಆ ಬಳಿಕ ಆರೋಪಿ ತಾನು ವಿವಾಹಿತ ಎಂಬ ಸತ್ಯ ಬಿಚ್ಚಿಟ್ಟಿದ್ದಾನೆ. ಇದರಿಂದ ಕಂಗಾಲಾದ ವಿದ್ಯಾರ್ಥಿನಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದೀಗ ಮಹಿಳಾ ಠಾಣಾ ಪೊಲೀಸರು ಆರೋಪಿ ಅನೀಶ್ ರೆಹಮಾನ್ ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 289

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.