ಕಾರ್ಕಳ: ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಟೋರಿಯಸ್ ದನಕಳ್ಳನನ್ನು ಬಂಧಿಸುವಲ್ಲಿ ಕಾರ್ಕಳ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಎಂದು ಗುರುತಿಸಲಾಗಿದೆ.
ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ ಚಿಕ್ಕಮಗಳೂರು, ಮೂಡುಗೆರೆ, ಆಲ್ದೂರು ಠಾಣೆಗಳಲ್ಲೂ ಪ್ರಕರಣ ದಾಖಲಾಗಿದ್ದವು. ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ಈತ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.