Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯ ಸರ ಸುಲಿಗೆ ಮಾಡಿದ 3 ಜನ ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಹಿಳೆಯ ಸರ ಸುಲಿಗೆ ಮಾಡಿದ 3 ಜನ ಆರೋಪಿಗಳ ಬಂಧನ

    September 6, 2022
    Share

    ಮಂಗಳೂರು: ಮಂಗಳೂರು ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಬಂಧಿತ ಆರೋಪಿಗಳಾಗಿದ್ದಾರೆ.‌

    ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್‌ನಲ್ಲಿ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಸರ ಸುಲಿಗೆ ಮತ್ತು ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದ ಸಿಸಿಬಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಾಗ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

    ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಮತ್ತು ಸುರೇಶ್ ರೈ ಟೆಂಪೋ ಚಾಲಕ ಹಾಗೂ ಸುಜಿತ್ ಶೆಟ್ಟಿ ಪೈನಾನ್ಸ್ ವ್ಯವಹಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.