Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: 9ನೇ ತರಗತಿ ಪಾಸಾಗಿದ್ದಕ್ಕೆ ವಿದ್ಯಾರ್ಥಿನಿಯಿಂದ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: 9ನೇ ತರಗತಿ ಪಾಸಾಗಿದ್ದಕ್ಕೆ ವಿದ್ಯಾರ್ಥಿನಿಯಿಂದ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನ ಬಂಧನ

    July 30, 2023
    Share

    ಉಳ್ಳಾಲ: ಫ್ಲೈಯಿಂಗ್ ಕಿಸ್ ಕೊಟ್ಟು, ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ಮ ಗ್ರಾಮದ ಬರುವ ನಿವಾಸಿ ಆಟೋ ಚಾಲಕ ಇಕ್ಬಾಲ್ (37) ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸ್ಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಎಸ್ಸೆಸ್ಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿಯು ಜೂನ್ ತಿಂಗಳಲ್ಲಿ ಅಂಬ್ಲಮೊಗರು ಗ್ರಾಮದ ಬಸ್ಸು ನಿಲ್ದಾಣದಲ್ಲಿ ಬೆಳಿಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿರುವುದಕ್ಕೆ ಟ್ರೀಟ್ ಇಲ್ವಾ? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದ. ಅಷ್ಟೇ ಅಲ್ಲದೆ ಬಾಲಕಿಯ ಕೈ, ಎದೆ ಭಾಗವನ್ನು ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ.‌ ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಕಳೆದ ಗುರುವಾರದಂದು ಮನೆಮಂದಿಗೆ ವಿಚಾರ ತಿಳಿಸಿದ್ದಳು. ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 226

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.