Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯ ಬಂಧನ

    January 13, 2024
    Share

    ಬಂಟ್ವಾಳ: ಬಿಸಿರೋಡಿನ ಹೃಯಭಾಗದ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ  ಹಾಜರುಪಡಿಸಿದೆ ಎಂದು ತಿಳಿಯಲಾಗಿದೆ.

    ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ, ಕುಂಜ್ಞಿಮೋನು ಯಾನೆ ಜಾಫರ್  ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

    ಈತ ಕಳೆದ ಎರಡು ವಾರಗಳ ಹಿಂದೆ ಬಿಸಿರೋಡಿನ ಅನಿಯಾ ದರ್ಬಾರ್ ಹಾಗೂ ಇಲ್ಲಿನ‌ ಕೆಲ ಅಂಗಡಿಗಳಿಗೆ ನುಗ್ಗಿ ಲಕ್ಷಾಂತರ ರೂ ನಗದು ಕಳವು ಮಾಡಿದ್ದ ಎನ್ನಲಾಗಿದೆ.

    ಇಲ್ಲಿನ ಅನಿಯಾ ದರ್ಬಾರ್ ಹೊಟೇಲ್ ನಿಂದ ಲಕ್ಷಾಂತರ ರೂ.ನಗದು ಕಳವು ಮಾಡಿರುವ ಬಗ್ಗೆ ನಗರ ಪೋಲೀಸ್ ಠಾಣೆಗೆ ಮಾಲಕ ದೂರು ನೀಡಿದ್ದರು.

    ಆರೋಪಿ ಹಮೀದ್ ಕಳವು ಮಾಡುವ ವೇಳೆ ಹೊಟೇಲ್ ಒಳಗಿನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಪೋಲಿಸ್ ತಂಡ ಬಂಧನಕ್ಕೆ ಕಾರ್ಯತಂತ್ರ ಹೆಣೆದಿದ್ದರು.ಹಮೀದ್ ಮಂಗಳೂರಿನಿಂದ ಪ್ರಯಾಣ ಬೆಳೆಸುತ್ತಿದ್ದ ವೇಳೆ ಬಂಟ್ವಾಳದಲ್ಲಿ ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈತ ಹಲವು ಕಳವು ಪ್ರಕರಣದ ಆರೋಪಿಯಾಗಿದ್ದು, ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳವು ಪ್ರಕರಣ ದಾಖಲಾಗಿದೆ, ಜೊತೆಗೆ ಈತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದೆ ತಲೆಮರೆಸಿಕೊಂಡಿದ್ದ ಕಾರಣಕ್ಕಾಗಿ ವಾರೆಂಟ್ ಆರೋಪಿ ಕೂಡ ಆಗಿರುವುದು ಪೋಲಿಸ್ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಹೇಳಲಾಗಿದೆ‌.

    ಇದೀಗ ಈತನನ್ನು ಬಂಟ್ವಾಳ ಡಿ.ವೈ‌ಎಸ್.ಪಿ.ವಿಜಯಪ್ರಸಾದ್ ಅವರ ನಿರ್ದೇಶನದಂತೆ,  ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರ ನೇತ್ರತ್ವದಲ್ಲಿ ಎಸ್‌ಐ.ರಾಮಕೃಷ್ಣ ಮತ್ತು ಎಸ್.ಐ.ಕಲೈಮಾರ್ ಅವರ ತಂಡದಲ್ಲಿ ಸಿಬ್ಬಂದಿಗಳಾದ ರಾಜೇಶ್ ಮತ್ತು ಇರ್ಶಾದ್ ಅವರು ಕಾರ್ಯಚರಣೆ ನಡೆಸಿ, ಆರೋಪಿಯನ್ನು ಬಂಧಿಸಿ‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 202

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.