Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮಾದಕದ್ರವ್ಯ ಎಂಡಿಎಂಎ ಮಾರಾಟ – ನೈಜೀರಿಯಾ ಪ್ರಜೆ ಸೇರಿದಂತೆ ಇಬ್ಬರ ಅರೆಸ್ಟ್..!
    ಇತ್ತೀಚಿನ ಸುದ್ದಿ

    ಮಂಗಳೂರು : ಮಾದಕದ್ರವ್ಯ ಎಂಡಿಎಂಎ ಮಾರಾಟ – ನೈಜೀರಿಯಾ ಪ್ರಜೆ ಸೇರಿದಂತೆ ಇಬ್ಬರ ಅರೆಸ್ಟ್..!

    December 7, 2024
    Share

    ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಂದ್ರಹಳ್ಳಿ ನಿವಾಸಿ ದರ್ಶನ್ ಕೆ.ಜಿ.(25), ನೈಜೀರಿಯಾ ಪ್ರಜೆ, ಹಾಲಿ ಬೆಂಗಳೂರಿನ ಬೆಟ್ಟಹಲ್ಸೂರ್ ನಲ್ಲಿ ವಾಸ್ತವ್ಯವಿರುವ ಚಿಕ ಜೋಸೇಫ್ ಇಝಿ(26) ಬಂಧಿತ ಆರೋಪಿಗಳು. ಇತ್ತೀಚೆಗೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ. ಆದ್ದರಿಂದ ಮಂಗಳೂರಿನಿಂದ ಹಾಗೂ ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 10,00,000 ರೂ‌. ಮೌಲ್ಯದ 200 ಗ್ರಾಂ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, ಮಾರುತಿ ಬಲೆನೋ ಕಾರು, 5 ಮೊಬೈಲ್ ಫೋನ್‌ಗಳು, ವಿವಿಧ ಬ್ಯಾಂಕ್‌ಗಳ 5 ಡೆಬಿಟ್ ಕಾರ್ಡ್‌ಗಳು, 7 ಸಿಮ್ ಕಾರ್ಡ್‌ಗಳು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 18,25,500 ರೂ. ಆಗಬಹುದು. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಆರೋಪಿ ಚಿಕ ಜೋಸೆಫ್ ಇಝಿ 2023ರ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದನು. ಇಲ್ಲಿ ಬೆಂಗಳೂರಿನಲ್ಲಿ ಯಲಹಂಕದಲ್ಲಿ ಹೇರ್ ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದ.‌ ಈ ಸಂದರ್ಭ ಈತನ ವಿರುದ್ಧ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ. ಈತನ ವಿರುದ್ಧ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದನು. ಈ ಮಾದಕದ್ರವ್ಯ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

    Post Views: 211

    Related Posts

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.