Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಖ್ಯಾತ ಸರಕಳ್ಳರಿಬ್ಬರ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕುಖ್ಯಾತ ಸರಕಳ್ಳರಿಬ್ಬರ ಬಂಧನ..!

    December 11, 2024
    Share

    ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಚಿನ್ನದ ಸರ ಹಾಗೂ ಕಳವುಗೈದ ಬೈಕ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ಸುರತ್ಕಲ್ ಕೃಷ್ಣಾಪುರ ನಿವಾಸಿ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಯಾನೆ ಅಬ್ಬಿ(43), ಬಂಟ್ವಾಳ ತಾಲೂಕಿನ ಅದ್ದೆಡ್ಡಿ ಹೌಸ್, ಬಿ.ಮೂಡ ಪರ್ಲಿಯಾ ಕ್ರಾಸ್ ರೋಡ್ ನಿವಾಸಿ ಉಮ್ಮರ್ ಶಿಯಾಫ್(29) ಬಂಧಿತ ಆರೋಪಿಗಳು.ಪ್ರಕರಣ-1ಡಿಸೆಂಬರ್ 6ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ಸುಜಿನಾ ಡಿಸೊಜಾರವರು ಮಧ್ಯಾಹ್ನ ವೇಳೆ ಅಂಗನವಾಡಿಯಲ್ಲಿ ಕೆಲಸದಲ್ಲಿರುವ ಸಂದರ್ಭ ಇಬ್ಬರು ಬೈಕಿನಲ್ಲಿ ಅಂಗನವಾಡಿಗೆ ಬಂದಿದ್ದಾರೆ. ಬಳಿಕ ಬೈಕಿನಿಂದ ಇಳಿದು ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದು, ಸುಜಿನಾ ಡಿಸೊಜಾರವರು ಮಂಜನಾಡಿಗೆ ಹೋಗುವ ದಾರಿಯನ್ನು ಹೇಳಿ, ಅಂಗನವಾಡಿಯ ಬಾಗಿಲನ್ನು ಹಾಕುವಷ್ಟರಲ್ಲಿ ಬಾಗಿಲನ್ನು ದೂಡಿ ಅಂಗನವಾಡಿಯ ಒಳಗೆ ಪ್ರವೇಶಿಸಿದ್ದಾರೆ. ಸುಜಿನಾ ಡಿಸೊಜಾರವರ ಕುತ್ತಿಗೆಯ ಚಿನ್ನದ ಸರವನ್ನು ಸುಲಿಗೆ ಮಾಡಿ ಆರೋಪಿಗಳು ಬೈಕ್ ಸಮೇತ ಪರಾರಿಯಾಗಿರುತ್ತಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.ಪ್ರಕರಣ-2ಡಿಸೆಂಬರ್ 9ರಂದು ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ ಗ್ರಾಮದ ಸುಂಕಮಾರು-ಮಂಜರಪಲ್ಕೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಸಂತಿ ಎಂಬವರಲ್ಲಿ ಬೈಕ್ ನಲ್ಲಿ ಬಂದ ಯುವಕ ಮತ್ತು ಯುವತಿ ಬಾಸ್ಕರ್ ಎಂಬವರ ಮನೆಗೆ ಹೋಗುವ ದಾರಿ ಯಾವುದೆಂದು ಕೇಳಿ ಬೈಕ್ ಸವಾರನು ವಸಂತಿಯವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಸಿಸಿ ಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ವೇಳೆ ಈ ಹಿಂದೆ ಹಲವು ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 4 ದಿನಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಹಬೀಬ್ ಹಸನ್ ಹಾಗೂ ಆತನ ಸಹಚರನು ಭಾಗಿಯಾಗಿರುವ ಕುರಿತು ಖಚಿತಗೊಂಡ ಮೇರೆಗೆ ಅವರ ಪತ್ತೆಗಾಗಿ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿಯಲ್ಲಿದ್ದಾನೆ ಮಾಹಿತಿ ಬಂದಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿ ಹಬೀಬ್ ಹಸನ್ ಎಂಬಾತನ ವಶದಿಂದ ಕಾರ್ಕಳದಿಂದ ಸುಲಿಗೆ ಮಾಡಿದ 17.43 ಗ್ರಾಂ ಚಿನ್ನದ ಸರ, ಸರಕಳ್ಳತನ ಮಾಡಲು ಉಪಯೋಗಿಸಿದ ಹೀರೋ ಹೊಂಡಾ ಬೈಕ್, ಒಂದು ಚೂರಿಯನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈತನನ್ನು ದಸ್ತಗಿರಿ ಮಾಡಲು ಪೊಲೀಸರು ಬಂದಾಗ ಅವರಿಗೆ ಹಲ್ಲೆ ನಡೆಸಲು ಈ ಚೂರಿಯನ್ನು ಇಟ್ಟುಕೊಂಡಿದ್ದನು ಎಂದು ತಿಳಿದುಬಂದಿದೆ.ಆರೋಪಿಗಳಿಬ್ಬರು 2 ತಿಂಗಳ ಹಿಂದೆ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿ ದಸ್ತಗಿರಿಯಾಗಿ ಮಂಗಳೂರು ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದವರು 2024ರ ಡಿಸೆಂಬರ್ 6ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಬಿಡುಗಡೆಗೊಂಡ ದಿನವೇ ಮಂಗಳೂರು ನಗರದ ಜೈಲ್ ರಸ್ತೆಯ ಪರಿಸರದಲ್ಲಿ ಬೈಕ್ ಕಳ್ಳತನ ಮಾಡಿ ಮರುದಿನ ಆರೋಪಿಗಳಿಬ್ಬರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಬಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಅಲ್ಲದೇ 2 ದಿನ ಬಿಟ್ಟು ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಇನ್ನೊಂದು ಬೈಕ್ ನ್ನು ಕಳವು ಮಾಡಿ ಅದೇ ಬೈಕ್ ನಲ್ಲಿ ಆರೋಪಿ ಹಬೀಬ್ ನು ಆತನ ಸ್ನೇಹಿತೆ ಮಹಿಳೆಯ ಜೊತೆಗೂಡಿ ಕಾರ್ಕಳದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದಾರೆ.ಆರೋಪಿ ಹಬೀಬ್ ಹಸನ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಬರ್ಕೆ, ಮೂಡಬಿದ್ರಿ, ಸುರತ್ಕಲ್, ಉಳ್ಳಾಲ, ಕೊಣಾಜೆ, ಬಜ್ಪೆ, ವಿಟ್ಲ, ಬಂಟ್ವಾಳ ನಗರ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 39 ಕಳವು, ಜಾನುವಾರು ಕಳವು, ಸರಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿ ಉಮ್ಮರ್ ಶಿಯಾಫ್ ಎಂಬಾತನು ಈ ಹಿಂದೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ 2 ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ 24 ಗಂಟೆ ಒಳಗಡೆ ಆರೋಪಿಯನ್ನು ಹಾಗೂ ಸುಲಿಗೆ ಮಾಡಿದ ಸೊತ್ತನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ಈ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಹಾಗೂ ಸೊತ್ತುಗಳ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐಯವರಾದ ಸುದೀಪ್ ಎಂ ವಿ, ಎಎಸ್‌ಐಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

    Post Views: 145

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.