Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಮಹಿಳಾ ವಂಚಕಿ ಬಂಧನ
    Uncategorized

    ಮಂಗಳೂರು : ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಮಹಿಳಾ ವಂಚಕಿ ಬಂಧನ

    October 20, 2025
    Share

    ಮಂಗಳೂರು: ಮಂಗಳೂರು ನಗರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಾಖಲಾಗಿದ್ದ ಒಟ್ಟು ಒಂಬತ್ತು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿತೆಯನ್ನು ಬರ್ಕೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

    ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ನಂ.77/2025 (ಕಲಂ 316(2), 318(2), 3(5) BNS-2023) ಪ್ರಕರಣದಲ್ಲಿ ಪಿರ್ಯಾದಿ ಜಯರಾಯ ರವರು ಮಂಗಳೂರು ನಗರದ ಎಂಪೈರ್ ಮಾಲ್‌ನಲ್ಲಿರುವ ಲ್ಯಾಪ್‌ಟಾಪ್ ಬಜಾರ್ ಎಂಬ ಅಂಗಡಿಯನ್ನು ನಡೆಸುತ್ತಿದ್ದು, ವಿವಿಧ ಕಂಪನಿಗಳ ಲ್ಯಾಪ್‌ಟಾಪ್ ಮಾರಾಟ ಮತ್ತು ಸರ್ವೀಸ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.ಪಿರ್ಯಾದಿದಾರರ ಅಂಗಡಿಯಿಂದ ಆರೋಪಿತೆ ಫರಿದಾ ಬೇಗಂ @ ಫರಿದಾ (28), ಪತಿ ರಮಿಜ್ ರಾಜ್, ನಿವಾಸಿ – ಮುತ್ತೂರು ಗ್ರಾಮ, ಮಂಗಳೂರು ತಾ. ಅವರು ತಮ್ಮ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್‌ಗಳನ್ನು ನೀಡಿ ಕೆಳಗಿನ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿ, ಒಟ್ಟು ರೂ. 1,98,000 ಪಾವತಿಸದೇ ವಂಚನೆ ಮಾಡಿದ್ದಾರೆಂದು ತಿಳಿದುಬಂದಿದೆ:ತನಿಖೆಯ ವೇಳೆ, ಬರ್ಕೆ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀ ಮೋಹನ ಕೊಟ್ಟಾರಿ ಅವರ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಹಾಗೂ ಮಹಿಳಾ ಸಿಬ್ಬಂದಿಗಳು ಆರೋಪಿತೆಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿತೆಯನ್ನು ಅಕ್ಟೋಬರ್ 19, 2025ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆಕೆಗೆ ನವೆಂಬರ್ 3, 2025ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ತನಿಖೆಯಿಂದ ತಿಳಿದುಬಂದಂತೆ, ಆರೋಪಿತೆ ವಿವಿಧ ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ನೀಡಿ, ತಮ್ಮ ಮಾತುಗಳಿಂದ ಮಾಲಕರ ವಿಶ್ವಾಸ ಗಳಿಸಿ, ಮಾನ್ಯತೆ ಇಲ್ಲದ ಬ್ಯಾಂಕ್ ಚೆಕ್‌ಗಳ ಮೂಲಕ ಬೆಲೆಬಾಳುವ ವಸ್ತುಗಳನ್ನು ಖರೀದಿಸಿ ವಂಚನೆ ಮಾಡುತ್ತಿದ್ದಾಳೆ.ಆಕೆಯ ವಿರುದ್ಧ ಈಗಾಗಲೇ ಕೆಳಗಿನ ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿವೆ:

    ಬರ್ಕೆ ಪೊಲೀಸ್ ಠಾಣೆ – 1 ಪ್ರಕರಣ

    ಕಾವೂರು ಪೊಲೀಸ್ ಠಾಣೆ – 1 ಪ್ರಕರಣ

    ಬಜ್ಪೆ ಪೊಲೀಸ್ ಠಾಣೆ – 1 ಪ್ರಕರಣ

    ಮೂಡಬಿದ್ರೆ ಪೊಲೀಸ್ ಠಾಣೆ – 1 ಪ್ರಕರಣ

    ಮುಲ್ಕಿ ಪೊಲೀಸ್ ಠಾಣೆ – 1 ಪ್ರಕರಣ

    ಪುತ್ತೂರು ನಗರ ಪೊಲೀಸ್ ಠಾಣೆ – 3 ಪ್ರಕರಣಗಳು

    ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆ – 1 ಪ್ರಕರಣ

    ಅಲ್ಲದೇ, ಮುಲ್ಕಿ ಠಾಣೆಯ ಪ್ರಕರಣದಲ್ಲಿ ಆಕೆ ನ್ಯಾಯಾಲಯದಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಇರುವುದರಿಂದ, ಆಕೆಯ ವಿರುದ್ಧ ವಾರೆಂಟ್ ಹೊರಡಿಸಲಾಗಿದೆ. ಕಾವೂರು ಮತ್ತು ಮೂಡಬಿದ್ರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಕೂಡಾ ಆಕೆ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 152

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.