Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಜಮ್ಮು & ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದು ಸರಿ: ಕೇಂದ್ರದ ನಿಲುವಿಗೆ ಸುಪ್ರೀಂ ಕೋರ್ಟ್‌ ಸಹಮತ
    ರಾಷ್ಟ್ರೀಯ ಸುದ್ದಿ

    ಜಮ್ಮು & ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದು ಸರಿ: ಕೇಂದ್ರದ ನಿಲುವಿಗೆ ಸುಪ್ರೀಂ ಕೋರ್ಟ್‌ ಸಹಮತ

    May 23, 2024
    Share

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರವು ಆಗಸ್ಟ್ 2019ರಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಎತ್ತಿಹಿಡಿಯುವ ಡಿಸೆಂಬರ್ 2023ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಸಂಬಂಧ ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನೆಲೆ ಸುಪ್ರೀಂ ಕೋರ್ಟ್ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

    Post Views: 262

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.