ಮಂಗಳೂರು: ಪುತ್ತೂರು ಕ್ಷೇತ್ರದಿಂದ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸಿ ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ ಪಕ್ಷಕ್ಕೆ ಇನ್ನಿತರ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, 15 ವರ್ಷದಿಂದ ಬೂತ್‌ಮಟ್ಟದಿಂದ ಪಕ್ಷಕ್ಕೆ ದುಡಿದಿದ್ದೇನೆ. ಲೋಕಸಭೆ, ವಿಧಾಸಭೆ ಚುನಾವಣೆಯಿಂದ ಹಿಡಿದು ಗ್ರಾ.ಪಂ ಮಟ್ಟದ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕಳೆದ ಬಾರಿ ಟಿಕೆಟ್ ತಪ್ಪಿದರೂ ಸಂಜೀವ ಮಠಂದೂರು ಅವರ ಗೆಲುವಿಗೆ ಶ್ರಮಿಸಿದ್ದೇನೆ. ಕೊನೇ ಕ್ಷಣದಲ್ಲಿ ನನಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ಕೊಟ್ಟರು ಎಂದು ಬೇಸರ ವ್ಯಕ್ತಪಡಿಸಿದರು. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದೇನೆ. ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ ಪಕ್ಷಕ್ಕೆ ಇನ್ನಿತರ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದರು. ನನಗೆ ಏ.17 ರಂದು ನಾಮಪತ್ರ ಸಲ್ಲಿಕೆ ಏ.17 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಅಂದು ದರ್ಬೆಯಿಂದ ಬೆಳಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಹಿಂದುತ್ವದ ಆಧಾರದಲ್ಲಿ ಈ ಕ್ಷೇತ್ರ ಉಳಿಸುವ ಆರ್ಶಿವಾದ ನೀಡಬೇಕು ಎಂದರು.