Facebook Twitter Instagram
    Monday, November 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು
    ಇತ್ತೀಚಿನ ಸುದ್ದಿ

    ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು

    November 16, 2026
    Share

    ಪುತ್ತೂರು: ಜಮೀನು ವಿಚಾರದ ತಕರಾರು ಹಾಗೂ ಪರಸ್ಪರ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ನೆರೆಮನೆಯವರು ಹಲ್ಲೆ ನಡೆಸಿ ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಲಕನ ತಾಯಿ 9 ಮಂದಿ ವಿರುದ್ಧ ದೂರು ನೀಡಿದ್ದಾರೆ.

    ಕೆಯ್ಯರು ಪಬ್ಲಿಕ್ ಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕ ಕಳೆದ ಮೂರು ತಿಂಗಳಿಂದ ಶಾಲೆಗೆ ತೆರಳದೆ ಮನೆಯಲ್ಲೇ ಇದ್ದ ಎನ್ನಲಾಗಿದೆ. ಅ.5ರಂದು ರಾತ್ರಿ 9 ಗಂಟೆ ಸುಮಾರಿಗೆ ತಿಂಗಳಾಡಿಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪರಿಚಯದ ಸುಧಾಕರ, ಪೆರಿಗೇರಿ ಚಂದ್ರ ಹಾಗೂ ಹರೀಶ್ ಎಂಬವರು ರಸ್ತೆ ಬದಿಯಲ್ಲಿ ನಿಂತು ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಾಲಕ ಕೂಡ ಬೈದು ಮನೆಗೆ ತೆರಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ಸುಧಾಕರ ಅವರ ಸಹೋದರ ಹರೀಶ್, ಪೆರಿಗೇರಿ ಚಂದ್ರ, ವಸಂತಿ, ಮೋಹನ್, ಗೋವಚಂದ್ರ ಟಿ.ಸಿ., ಚಂದ್ರ ಹಾಗೂ ಪ್ರಮೀಳಾ ಸುಮಾ ಸೇರಿದಂತೆ ಕೆಲವರು ಬಾಲಕನ ಮನೆ ಅಂಗಳಕ್ಕೆ ಬಂದು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೊರಬಂದ ಬಾಲಕನ ತಾಯಿಯೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಬಾಲಕ ಪ್ರಶ್ನಿಸಿದಾಗ ಗೋವಚಂದ್ರ ಆತನ ತಲೆಯನ್ನು ಹಿಡಿದುಕೊಂಡಿದ್ದಾರೆ. ಇದೇ ಸಂದರ್ಭ ಪೆರಿಗೇರಿ ಚಂದ್ರ ಹಂಚಿನ ತುಂಡಿನಿಂದ ಬಾಲಕನ ತಲೆಯ ಮುಂಭಾಗಕ್ಕೆ ಹಾಗೂ ಸುಧಾಕರ ಜಲ್ಲಿಕಲ್ಲಿನಿಂದ ತಲೆಯ ಹಿಂಭಾಗಕ್ಕೆ ಹೊಡೆದು ಗಾಯಗೊಳಿಸಿದ್ದಾರೆ. ಸುಮಾ ಕೋಲಿನಿಂದ ಬೆನ್ನಿಗೆ ಹೊಡೆದಿದ್ದು, ಇತರರು ಕೈಯಿಂದ ಬೆನ್ನು, ಬಲಗೈ, ಮೈ ಹಾಗೂ ಕಾಲಿಗೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಜಗಳ ಬಿಡಿಸಲು ಬಂದ ಬಾಲಕನ ತಾಯಿ ಹಾಗೂ ತಂಗಿಯನ್ನೂ ಸುಮಾ, ವಸಂತಿ ಮತ್ತು ಪ್ರಮೀಳಾ ದೂಡಿ ಹಾಕಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಬಾಲಕನನ್ನು ತಾಯಿ ಆಟೋ ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೊರರೋಗಿಯಾಗಿ ಚಿಕಿತ್ಸೆ ಕೊಡಿಸಿದ್ದಾರೆ.

    ಆರಂಭದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರೂ, ಬಾಲಕನ ತಂದೆ ದೂರು ಹಿಂಪಡೆದು ಮನೆಗೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ.ಆದರೆ, ನೆರೆಹೊರೆಯವರಿಂದ ಬಾಲಕನಿಗೆ ಸಮಸ್ಯೆ ಮುಂದುವರಿದ ಹಿನ್ನೆಲೆಯಲ್ಲಿ ಸುಮಾರು 20 ದಿನಗಳ ಬಳಿಕ ತಾಯಿ ವನಿತಾ ಅವರು ವಕೀಲ ಚೇತನ್ ಅವರ ಮೂಲಕ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ.

    ಅದರಂತೆ ಅ.30ರಂದು ಮಕ್ಕಳ ಸಹಾಯವಾಣಿ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಬಾಲಕನನ್ನು ಮಂಗಳೂರಿನ ಬೋಂದೇಲ್‌ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದು, ಬಳಿಕ ಸರಕಾರಿ ಬಾಲಕರ ಬಾಲಮಂದಿರದಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ.

    Post Views: 11

    Related Posts

    ಪುತ್ತೂರು: ಸೇಂದಿ ಅಂಗಡಿಗೆ ಕನ್ನ!! ಬೀಗ ಒಡೆದು ಕಾಣಿಕೆ ಡಬ್ಬಿಯ ಹಣ ಕಳವು

    November 16, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

    November 16, 2026

    ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 19 ವರ್ಷದ ಯುವಕ ದುರ್ಮರಣ

    November 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಸೇಂದಿ ಅಂಗಡಿಗೆ ಕನ್ನ!! ಬೀಗ ಒಡೆದು ಕಾಣಿಕೆ ಡಬ್ಬಿಯ ಹಣ ಕಳವು

    November 16, 2026

    ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು

    November 16, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

    November 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.