Facebook Twitter Instagram
    Wednesday, August 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ

    August 12, 2026
    Share

    ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

    ಈ ವೇಳೆ ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪ್ರಮುಖ ಆರೋಪಿ ಬಾಗಲಕೋಟೆ ನಿವಾಸಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪೊಲೀಸರ ವಶದಿಂದ ಪರಾರಿಯಾಗಿದ್ದನು.ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉತ್ತರ ಪ್ರದೇಶ ಮೂಲದ ರವಿ ಬೌರಾ ಹಾಗೂ ಮೊಹಮ್ಮದ್ ಸಾಹೀಲ್ ಸಿದ್ದೀಖಿ ಅಲಿಯಾಸ್ ಮೊಹಮ್ಮದ್ ಸಾಹಿಲ್ ಎಂಬ ಆರೋಪಿಗಳನ್ನು ಬಂಧಿಸಿ, ಕಳವು ಮಾಡಲಾಗಿದ್ದ ಚಿನ್ನದ ಸರ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿತ್ತು. ಪೊಲೀಸರ ವಶದಿಂದ ಪರಾರಿಯಾಗಿದ್ದ ಅಲ್ತಾಫ್ ಹುಸೈನ್ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ತಂಡವು ನಿರಂತರ ಕಾರ್ಯಾಚರಣೆ ನಡೆಸಿ, ಖಚಿತ ಮಾಹಿತಿ ಆಧರಿಸಿ ಆಗಸ್ಟ್ 10ರಂದು ವಿಜಯಪುರ ನಗರದಲ್ಲಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದೆ.

    ಪಾಂಡೇಶ್ವರ ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಮಾರುತಿ ಪಿ. ಹಾಗೂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಸಾಗರ್ ಮತ್ತು ಆಂಜನೇಯ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಯ ವಿರುದ್ಧ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

    Post Views: 8

    Related Posts

    ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ: ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ

    August 12, 2026

    ಮಂಗಳೂರು: ದೈವಸ್ಥಾನದ ಹುಂಡಿ ಕದ್ದ ಆರೋಪಿ ಅರೆಸ್ಟ್- 18 ಪ್ರಕರಣಗಳು ಬಯಲಿಗೆ

    August 12, 2026

    ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ- ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    August 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ: ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ

    August 12, 2026

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ

    August 12, 2026

    ಮಂಗಳೂರು: ದೈವಸ್ಥಾನದ ಹುಂಡಿ ಕದ್ದ ಆರೋಪಿ ಅರೆಸ್ಟ್- 18 ಪ್ರಕರಣಗಳು ಬಯಲಿಗೆ

    August 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.