Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ
    ಇತ್ತೀಚಿನ ಸುದ್ದಿ

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026
    Share

    ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್‌ಸಿ ಮಧು ಹಾಗೂ ಸಿಪಿಸಿ ಭೀಮನಗೌಡ ಎಂ. ಬಿರಾದರ್ ಅವರು ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಂದ ದೂರಿನ ಮೇರೆಗೆ ಪಡ್ನೂರು ಗ್ರಾಮದ ಮುಂಡಾಜೆ ಎಂಬಲ್ಲಿಗೆ ತೆರಳಿದ್ದರು.ಅಲ್ಲಿ ಮಹಿಳೆಯೊಬ್ಬರು ತನ್ನ ಪತಿ ಹಲ್ಲೆ ನಡೆಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

    ಈ ಕುರಿತು ಆಕೆಯ ಪತಿ ನವೀನ್ ಬಳಿ ವಿಚಾರಿಸಿದಾಗ, ಆತ ಕೋಪಗೊಂಡು ಪತ್ನಿಗೆ ಮತ್ತೆ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಮುಂದಾದ ಪೊಲೀಸ್ ಸಿಬ್ಬಂದಿಗೆ ನವೀನ್, ಆತನ ತಾಯಿ ಹಾಗೂ ಸಹೋದರ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಲಾಗಿದೆ.

    ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 107/2026ರಂತೆ ಬಿಎನ್‌ಎಸ್‌ 2023ರ ಕಲಂ 352, 132, 121(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    ಪ್ರಕರಣದ ಆರೋಪಿ ನವೀನ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಬಳಿಕ ಬಿಡುಗಡೆಗೊಂಡ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 9

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.