Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ಗೆ ಆಶ್ರಯ – 7 ಮಂದಿ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ಗೆ ಆಶ್ರಯ – 7 ಮಂದಿ ವಿರುದ್ಧ ಪ್ರಕರಣ ದಾಖಲು

    January 11, 2024
    Share

    ಮಂಗಳೂರು : ಪೊಲೀಸ್ ಮೇಲೆಯೇ ದಾಳಿಗೆತ್ನಿಸಿ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟೋರಿಯಸ್ ರೌಡಿ ಆಕಾಶಭವನ ಶರಣ್ (37)ಗೆ ಆಶ್ರಯ ನೀಡಿರುವ ಆರೋಪದಲ್ಲಿ 7 ಮಂದಿಯ ವಿರುದ್ಧ ವಿವಿಧ ಠಾಣೆಗಳಲ್ಲಿ 5 ಪ್ರಕರಣ ದಾಖಲಾಗಿದೆ. ಸುಮಾರು 21ಕ್ಕಿಂತಲೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆಕಾಶಭವನ ಶರಣ್ ಪತ್ತೆಗೆ ಸಿಸಿಬಿ ಪೊಲೀಸರು 20 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರು‌. ಈ ವೇಳೆ ತಲೆಮರೆಸಿಕೊಳ್ಳಲು ವಿವಿಧ ಕಡೆಗಳಲ್ಲಿ ಆತನಿಗೆ ಹಲವರು ಸಹಾಯ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು ಆಶ್ರಯ ನೀಡಿದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೋಡಿಕಲ್‌ ನಿವಾಸಿ ಶೀಲಾ, ಉಡುಪಿ ಸಂತೆಕಟ್ಟೆ ನಿವಾಸಿ ಶರತ್ ಭಂಡಾರಿ ಹಾಗೂ ಆತನ ಪತ್ನಿ ಮಯೂರಿ ಭಂಡಾರಿ, ಧನಂಜಯ ಹಾಗೂ ಚೇತನ್ ಬುಳ್ಳ ಎಂಬವರ ವಿರುದ್ಧ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ರೀತಿ ಶಿವ ಕರ್ಬಿಂಸ್ಥಾನ ಎಂಬಾತನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ, ಶಾನು ಶೆಟ್ಟಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶರಣ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಂಡ ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 219

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.