Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕಣಜದ ಹುಳಗಳ ದಾಳಿ; ತೆಂಗಿನ ಕಾಯಿ ಕೀಳುತ್ತಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಉಳ್ಳಾಲ: ಕಣಜದ ಹುಳಗಳ ದಾಳಿ; ತೆಂಗಿನ ಕಾಯಿ ಕೀಳುತ್ತಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರ ಗಾಯ

    September 6, 2022
    Share

    ತೊಕ್ಕೊಟ್ಟು: ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.

    ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ ಅವರು ಕಣಜದ ಹುಳುವಿನ‌ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಜಿತನ್ ಅವರು ವೃತ್ತಿ ಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಿಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾ ಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.

    ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿಗೂ ಹುಳಗಳು ದಾಳಿ ನಡೆಸಿ ಗಾಯಗೊಳಿಸಿವೆ.

    ಪ್ರವೀಣ್ ಮತ್ತು ಅವರ ಎರಡನೇ ತರಗತಿಯ ಮಗಳು ಧೃತಿ ಗಾಯಗೊಂಡಿದ್ದು ಇಬ್ಬರಿಗೂ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.

    Post Views: 266

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.