ಉಡುಪಿ: ನಿನ್ನೆ ಬೆಳಿಗ್ಗೆ 2:30ರ ಸುಮಾರಿಗೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿದಾಗ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಆರೋಪಿಯನ್ನು ಉಡುಪಿ ತಾಲ್ಲೂಕು ಕೊಡವೂರು ಗ್ರಾಮದ ಜುಮಾದಿನಗರ ನಿವಾಸಿ ಸಾಗರ್ (25) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸರು ಕೂಡಲೇ ಆತನನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈತ ವಿಚಾರಣೆಯ ಸಂದರ್ಭ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಮತ್ತು ಅವರ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆದಿದ್ದಾನೆ ಎಂದು ಆರೋಪಿಸಲಾಗಿದೆ.




