Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ
    ಇತ್ತೀಚಿನ ಸುದ್ದಿ

    ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ

    July 14, 2025
    Share

    ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ.

    ಈ ವೇಳೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ನನ್ನು ದಸ್ತಗಿರಿ ಮಾಡಿದ್ದು, ಈತನನ್ನು ತನಿಖೆಗೆ ಒಳಪಡಿಸಿ ಜು.13ರಂದು ತನಿಖೆಯ ಬಗ್ಗೆ ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಕರೆದುಕೊಂಡು ಹೋಗಲಾಗಿತ್ತು.

    ಈ ಸಮಯದಲ್ಲಿ ಆರೋಪಿ ಆತನಿಗೆ ಕೈಕೊಳ ಹಿಡಿದುಕೊಂಡಿದ್ದ ಸಿಬ್ಬಂದಿ ರಿತೇಶ್ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಬಂದಿದ್ದನು.

    ಆಗ ಪೊಲೀಸ್ ನಿರೀಕ್ಷಕರರಾದ ರಾಮಚಂದ್ರ ನಾಯಕ್ ತಡೆದಾಗ ಅವರ ಮೇಲು ಒದೆಯಲು ಬಂದಿದ್ದನು. ಆ ಸಮಯ ಲಾಠಿಯಿಂದ ಆತನ ಕಾಲಿಗೆ ಹೊಡೆದು, ಅವನನ್ನು ನಿಯಂತ್ರಿಸಿದ್ದು, ಉಳಿದ ಸಿಬ್ಬಂದಿಗಳು ಆತನನ್ನು ಹಿಡಿದುಕೊಂಡರು.

    ಈ ಪ್ರಕರಣದಲ್ಲಿ ಗಾಯಗೊಂಡ ಸಿಬ್ಬಂದಿ ರಿತೇಶ್ ಹಾಗೂ ಆರೋಪಿ ಮೊಹಮ್ಮದ್ ಡಾನೀಶ್ ಅವರನ್ನು ಚಿಕಿತ್ಸೆಯ ಬಗ್ಗೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಮಾಡಲಾಗಿದೆ.

    Post Views: 181

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.