Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಂಡದಿಂದ ನಾಲ್ವರಿಗೆ ಹಲ್ಲೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ತಂಡದಿಂದ ನಾಲ್ವರಿಗೆ ಹಲ್ಲೆ..!

    July 15, 2025
    Share

    ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ ಸರ್ಫರಾಝ್ ಎಂಬಾತ ವ್ಯವಹಾರಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಮಂಗಳೂರಿಗೆ ಕರೆದಿದ್ದು ಅದರಂತೆ ಜು.11ರಂದು ಸಂಜೆ ಮನಾಥ್ ಮತ್ತಿತರರು ಪಂಪ್‌ವೆಲ್‌ಗೆ ಬಂದಿದ್ದರು. ಬಳಿಕ ಅಲ್ಲಿಂದ ಮಲ್ಲೂರಿಗೆ ಕರೆದೊಯ್ದು ನಾಲ್ಕು ಮಂದಿಯನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಸುಮಾರು 10 ಮಂದಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.ಆರೋಪಿಗಳು ಯಾಸರ್ ಅರಾಫತ್‌ನ ಕಿಸೆಯಲ್ಲಿದ್ದ 90,000 ರೂ. ಕಿತ್ತರಲ್ಲದೆ, ಮುಹಮ್ಮದ್ ಸಾಹಿರ್‌ನ ಗೂಗಲ್ ಪೇಯಿಂದ 10 ಸಾವಿರ ರೂ. ವರ್ಗಾಯಿಸಿದ್ದಾರೆ. ಅಲ್ಲದೆ ಮೊಬೈಲ್‌ನ ಲಾಕ್ ತೆಗೆಸಿ ಶೇರ್‌ನ ವ್ಯವಹಾರಕ್ಕೆ ಸಂಬಂಧಿಸಿದ ಸ್ಟಾಕ್‌ನ ಅಕೌಂಟ್‌ನಿಂದ 28 ಲಕ್ಷ ರೂ. ಮೌಲ್ಯದ ಶೇರ್‌ಗಳನ್ನು ವರ್ಗಾವಣೆ ಮಾಡಿದ್ದಾರೆ. ಅಲ್ಲದೆ ಪರ್ಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಹಾಗೂ 1,000 ರೂ. ನಗದು ಸೆಳೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಸಂಜೆ 5:30ರಿಂದ ರಾತ್ರಿ 10:30ರ ತನಕ ಅಕ್ರಮ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ್ದು, ಹೊಟ್ಟೆ ಮತ್ತು ತಲೆಗೆ ತುಳಿದ ಕಾರಣ ಅರ್ಶಕ್ ಅಹ್ಮದ್‌ರಿಗೆ ಗಾಯವಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 140

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.