Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವ್ಯಕ್ತಿ ಹಾಗೂ ಆತನ ಸ್ನೇಹಿತನಿಗೆ ತಂಡದಿಂದ ರಾಡಿನಿಂದ ಹಲ್ಲೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ವ್ಯಕ್ತಿ ಹಾಗೂ ಆತನ ಸ್ನೇಹಿತನಿಗೆ ತಂಡದಿಂದ ರಾಡಿನಿಂದ ಹಲ್ಲೆ..!

    December 8, 2023
    Share

    ಬಂಟ್ವಾಳ: ಪ್ರಕರಣವೊಂದರ ಮಾತುಕತೆಯ ಬಗ್ಗೆ ತಕರಾರು ಎತ್ತಿ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಸ್ನೇಹಿತನಿಗೆ ತಂಡವೊಂದು ಪಂಚ್ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಪ್ರಕರಣ ಕಾವಳಮುಡೂರು ಗ್ರಾಮದ ಕಾವಳಕಟ್ಟೆ ಬಸ್ ನಿಲ್ದಾಣದ ಬಳಿ ನಡೆದಿದೆ.

    ಕಾವಳಪಡೂರು ನಿವಾಸಿ ಮಹಮ್ಮದ್ ಶಮೀಮ್ (30) ಅವರು ಗುರುವಾರ ಬೆಳಿಗ್ಗೆ ತನ್ನ ನೆರೆಕರೆಯವರಾದ ಮಹಮ್ಮದ್ ಜುಬೈರ್, ಮಹಮ್ಮದ್ ಹನೀಫ್, ಮಹಮ್ಮದ್ ಫಯಾಜ್, ಮಹಮ್ಮದ್ ಶರೀಫ್ ಎಂಬವರೊಂದಿಗೆ ಕಾವಳಮುಡೂರು ಗ್ರಾಮದ ಕಾವಳಕಟ್ಟೆ ಬಸ್ ನಿಲ್ದಾಣದ ಬಳಿಯಿದ್ದಾಗ, ಆರೋಪಿಗಳಾದ ಪರಿಚಯಸ್ಥ ಮಹಮ್ಮದ್ ಫಜೀಮ್, ಮಹಮ್ಮದ್ ಇಮ್ರಾನ್, ಇರ್ಪಾನ್ ಬೊಂಬಿಕ್ಕು, ಹಂಝ ಆಲಂಗಾಲು, ರಹೀಂ ಧೂಮಳಿಕೆ ಅವರುಗಳು ಅಲ್ಲಿಗೆ ಬಂದು, ಶಮೀಮ್ ಅವರನ್ನು ಅಂಗಡಿಯಿಂದ ಹೊರಗೆ ಕರೆದು, ಹಿಂದಿನ ದಿನ ತರಕಾರಿ ಹನೀಫ್ ಎಂಬವರಿಗೆ ಸಂಬಂಧಿಸಿ ನಡೆದಿದ್ದ ಮಾತುಕತೆಯ ಬಗ್ಗೆ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ, ಆರೋಪಿಗಳ ಪೈಕಿ ಮಹಮ್ಮದ್ ಫಜೀಮ್ ಮತ್ತು ಇರ್ಪಾನ್ ಬೊಂಬಿಕ್ಕು ಮತ್ತು ಮಹಮ್ಮದ್ ಇಮ್ರಾನ್ ಅವರು ತಾವುಗಳು ತಂದಿದ್ದ ಪಂಚ್ ಹಾಗೂ ರಾಡ್ ನಿಂದ ಹಲ್ಲೆ ನಡೆಸಿರುತ್ತಾರೆ. ಈ ಸಂದರ್ಭ ಜೊತೆಯಲ್ಲಿದ್ದವರು ಪ್ರತಿರೋಧಿಸಿದಾಗ, ಆರೋಪಿಗಳೆಲ್ಲರೂ ಅವರಿಗೂ ಕೂಡಾ ಪಂಚ್, ರಾಡ್ ಹಾಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಜನ ಸೇರುವುದನ್ನು ಕಂಡು ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈಯುತ್ತಾ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ.ಹಲ್ಲೆಯಿಂದ ಗಾಯಗೊಂಡ ಶಮೀಮ್, ಮಹಮ್ಮದ್ ಜುಬೈರ್, ಮಹಮ್ಮದ್ ಹನೀಫ್ ಅವರು ಪೂಂಜಾಲಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಅಪರಾಧ ಕ್ರಮಾಂಕ 109/2023, ಕಲಂ 143, 147, 148, 323, 324, 504, 506, 3 149 ಭಾದಂಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.