Facebook Twitter Instagram
    Monday, May 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ – ಆರೋಪಿಗಳಿಗಾಗಿ ತೀವ್ರ ಹುಡುಕಾಟ
    ಇತ್ತೀಚಿನ ಸುದ್ದಿ

    ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ – ಆರೋಪಿಗಳಿಗಾಗಿ ತೀವ್ರ ಹುಡುಕಾಟ

    May 25, 2026
    Share

    ಮಂಗಳೂರು: ತಡರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೆಬಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆಮಂಗಳೂರಿನ ಕೋಡಿಕಲ್‌ನಲ್ಲಿ ಭಾನುವಾರ ನಡೆದಿದೆ. ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ್ ಕಾಂತಿ ಅವರ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಾರಾಯಣ ಗುರು ಸಹಕಾರಿ ಸಂಘದ ಕಟ್ಟಡದ ಬಳಿ ಕಾನ್‌ಸ್ಟೆಬಲ್ ಹನುಮಂತ್ ಮತ್ತು ಗೃಹರಕ್ಷಕ ಸಿಬ್ಬಂದಿ ಬಸವರಾಜ್ ಕರ್ತವ್ಯದಲ್ಲಿದ್ದರು.ಈ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಸವಾರರು ನಿಲ್ಲಿಸದೆ ತಲೆ ತಪ್ಪಿಸಿಕೊಂಡಿದ್ದಾರೆ. ಆದರೆ, ಕೆಲವು ನಿಮಿಷಗಳ ನಂತರ ಮತ್ತೆ ಸ್ಥಳಕ್ಕೆ ಹಿಂತಿರುಗಿದ ಬೈಕ್‌ ಸವಾರ, ಕಾನ್‌ಸ್ಟೆಬಲ್ ಹನುಮಂತ್ ಅವರ ತಲೆಗೆ ಬಲವಾಗಿ ಹೊಡೆದು ಎಸ್ಕೇಪ್ ಆಗಿದ್ದಾನೆ. ಗಾಯಗೊಂಡ ಸಿಬ್ಬಂದಿ ಹಲ್ಲೆಕೋರರನ್ನು ಹಿಡಿಯಲು ಪ್ರಯತ್ನಿಸಿದರಾದರೂ ಅವರು ಸಿಗಲಿಲ್ಲ.ಸದ್ಯ ತಲೆಗೆ ಸಣ್ಣಪುಟ್ಟ ಗಾಯಗಳಾಗಿರುವ ಹನುಮಂತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಪಾಯದಿಂದ ಪಾರಾಗಿದ್ದಾರೆ. ಇಡೀ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉರ್ವಾ ಪೊಲೀಸರು ಆರೋಪಿಗಳ ವಿರುದ್ಧ ಕೊಲೆ ಯತ್ನ (BNS 109) ಸೇರಿದಂತೆ ಹಲವು ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

    Post Views: 10

    karnataka mangalore PoliceInvestigation

    Related Posts

    ವಿದೇಶಿ ಉದ್ಯೋಗ ಕನಸು ಭಂಗ: ₹6.23 ಲಕ್ಷ ಪಡೆದು ಜಾಲ ಪರಾರಿ

    May 25, 2026

    ರಸ್ತೆ ದುರಂತದ ಮಧ್ಯೆ ನೀಚ ಕೃತ್ಯ: ಮೃತ ಮಹಿಳೆಯ ಚಿನ್ನ ಕದ್ದೊಯ್ದ ಖದೀಮರು

    May 25, 2026

    ತಟ್ಟೆ ಹಕ್ಕಲು ನದಿಯಲ್ಲಿ ದುರಂತ: ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    May 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.