Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು ಹುಡುಗರ ಮೇಲೆ ಹಲ್ಲೆ ಮಾಡಿದ ರೌಡಿಗಳು ಅರೆಸ್ಟ್..!
    ಇತ್ತೀಚಿನ ಸುದ್ದಿ

    ಬೈಂದೂರು ಹುಡುಗರ ಮೇಲೆ ಹಲ್ಲೆ ಮಾಡಿದ ರೌಡಿಗಳು ಅರೆಸ್ಟ್..!

    December 10, 2022
    Share

    ಬೆಂಗಳೂರು : ಬೆಂಗಳೂರು ಕುಂದಲಹಳ್ಳಿ ಗೇಟ್ ಬಳಿ ಬೇಕರಿಯೊಂದಕ್ಕೆ ನುಗ್ಗಿ ಬೈಂದೂರು ಮೂಲದ ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪುಡಿರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

    ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ ಪ್ರಜ್ವಲ್ ಶೆಟ್ಟಿ, ನಿತೀನ್ ಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಡಿ.8 ರಾತ್ರಿ 11.30 ರ ಸಮಯದಲ್ಲಿ 7-8 ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಹೋಗಿದ್ದಾರೆ. ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಪುಡಿ ರೌಡಿಗಳು ಅವ್ಯಾಚ್ಯ ಶಬ್ಧಗಳಿಂದ ನಿಂದಿಸುತ್ತಾ, ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿ ಹಣ ತೆಗೆದುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.