Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ – ಯುವಕರಿಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು : ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ – ಯುವಕರಿಬ್ಬರು ಅರೆಸ್ಟ್

    October 10, 2024
    Share

    ಮಂಗಳೂರು: ನಗರದ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆತ್ನಿಸಿದ ಆರೋಪದಲ್ಲಿ ಬರ್ಕೆ ಠಾಣಾ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ.

    ಎನ್ಎಸ್‌ಯುಐ ಕಾರ್ಯಕರ್ತ ತನುಷ್ ಶೆಟ್ಟಿ ಹಾಗೂ ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತ ಆರೋಪಿಗಳು. ಬಂಧಿತ ತನುಷ್ ಶೆಟ್ಟಿ ಈ ಬಾರಿ ಎಂಪಿ ಚುನಾವಣೆ ವೇಳೆ ನೋಟಾ ಕ್ಯಾಂಪೇನ್ ನಡೆಸಿದ್ದನು. ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣ ಕಡೆಯಿಂದ ಯುವಕರಿದ್ದ ಕಾರನ್ನು ಓವರ್ ಟೇಕ್ ತಮ್ಮ ಆಡಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿಯವರು ತಮ್ಮ ಕೊಡಿಯಾಲಬೈಲ್‌ನ ಮನೆಗೆ ತಲುಪಿದಾಗ, ಅಲ್ಲಿ ಅವರನ್ನು ಅವಾಚ್ಯವಾಗಿ ನಿಂದಿಸಿ ಮನೆಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಗೆ ಹಲ್ಲೆಮಾಡಲು ಯತ್ನಿಸಿದ್ದಾರೆ. ತಕ್ಷಣ ಜಿತೇಂದ್ರ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 278

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.