Facebook Twitter Instagram
    Monday, August 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ₹750 ವಂಚನೆಗೆ ಯತ್ನ; ನಕಲಿ ವಿಡಿಯೋ ವಿರುದ್ಧ ಪೊಲೀಸರಿಗೆ ದೂರು
    ಇತ್ತೀಚಿನ ಸುದ್ದಿ

    ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ₹750 ವಂಚನೆಗೆ ಯತ್ನ; ನಕಲಿ ವಿಡಿಯೋ ವಿರುದ್ಧ ಪೊಲೀಸರಿಗೆ ದೂರು

    August 17, 2026
    Share

    ಸುಬ್ರಹ್ಮಣ್ಯ: ನಾಗರ ಪಂಚಮಿ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಪುಣ್ಯ ಪುರಾಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರನ್ನು ವಂಚಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.

    ನಾಗರ ಪಂಚಮಿ ಹಿನ್ನೆಲೆಯಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಲ್ಲಿ, ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆ ನೆರವೇರಿಸಿ ಪ್ರಸಾದವನ್ನು ಭಕ್ತರ ಮನೆಗೆ ಕಳುಹಿಸಿಕೊಡಲಾಗುವುದು ಎಂಬ ಸಂದೇಶ ನೀಡಲಾಗಿದೆ. ಈ ವಿಡಿಯೋವನ್ನು ನಂಬಿ ಭಕ್ತರು ಹಣ ಕಳೆದುಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಎಚ್ಚರಿಕೆಯ ಮಾಹಿತಿ ರವಾನಿಸಿದೆ.

    ನಕಲಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದ ತಕ್ಷಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಿಂದ ಹಣ ಪಡೆಯಲು ಯತ್ನಿಸಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

    ದೇಶ-ವಿದೇಶಗಳಲ್ಲಿ ಅಪಾರ ಭಕ್ತರನ್ನು ಹೊಂದಿರುವ ಕುಕ್ಕೆ ಕ್ಷೇತ್ರದ ಹೆಸರಿನಲ್ಲಿ ಈ ಹಿಂದೆಯೂ ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆಗೆ ಯತ್ನಿಸಿರುವ ಘಟನೆಗಳು ನಡೆದಿವೆ. ಹೀಗಾಗಿ, ಇಂತಹ ನಕಲಿ ಜಾಹೀರಾತು ಹಾಗೂ ವಿಡಿಯೋಗಳಿಗೆ ಭಕ್ತರು ಮರುಳಾಗದಂತೆ ದೇವಸ್ಥಾನದ ಆಡಳಿತ ಮನವಿ ಮಾಡಿದೆ. ದೇವಸ್ಥಾನದ ಅಧಿಕೃತ ಮೂಲಗಳಿಂದ ಮಾಹಿತಿ ಪಡೆಯದೆ ಯಾವುದೇ ಅಪರಿಚಿತ ಮೊಬೈಲ್​ ಸಂಖ್ಯೆ, ಸಾಮಾಜಿಕ ಜಾಲತಾಣದ ಲಿಂಕ್​ ಅಥವಾ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬಾರದು ಎಂದು ದೇವಸ್ಥಾನದ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

    ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವರ ಫೋಟೋ ಹಾಗೂ ಸ್ಥಳೀಯ ವಸತಿಗೃಹದ ಮಾಹಿತಿಯನ್ನು ಬಳಸಿಕೊಂಡು ಭಕ್ತರನ್ನು ನಂಬಿಸಿ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲಾಗಿತ್ತು. ಭಕ್ತರೊಬ್ಬರು ಆನ್​ಲೈನ್‌ನಲ್ಲಿ ಕೊಠಡಿ ಬುಕ್ಕಿಂಗ್ ಮಾಡಿದ್ದರು. ಹಣ ಪಾವತಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ಫೋಟೋ ಹೊಂದಿರುವ ‘ಅನಘ ಗೆಸ್ಟ್ ಹೌಸ್, ನಿಯರ್ ಆದಿ ಸುಬ್ರಹ್ಮಣ್ಯ ಟೆಂಪಲ್’ ಎಂಬ ವಿವರಗಳಿರುವ ಬಿಲ್‌ವೊಂದನ್ನು ವಂಚಕರು ಕಳುಹಿಸಿದ್ದರು. ಆದರೆ ಬಳಿಕ ನಿಜವಾದ ವಸತಿಗೃಹದಲ್ಲಿ ವಿಚಾರಿಸಿದಾಗ ಯಾವುದೇ ಕೊಠಡಿ ಬುಕ್ಕಿಂಗ್ ಆಗಿಲ್ಲ ಎಂಬುದು ತಿಳಿದುಬಂದಿತ್ತು.

    ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತರು ವಸತಿಗೃಹದ ಅಧಿಕೃತ ಸಂಪರ್ಕ ಸಂಖ್ಯೆ ಮೂಲಕ ನೇರವಾಗಿ ಸಂಪರ್ಕಿಸಿ ಕೊಠಡಿ ಬುಕ್ಕಿಂಗ್ ಖಚಿತಪಡಿಸಿಕೊಂಡ ಬಳಿಕವೇ ಹಣ ಪಾವತಿಸುವುದು ಸುರಕ್ಷಿತ. ಅನುಮಾನಾಸ್ಪದ ವೆಬ್‌ಸೈಟ್ ಅಥವಾ ಆನ್‌ಲೈನ್ ವಂಚನೆಗೆ ಒಳಗಾದರೆ ತಕ್ಷಣವೇ ಬ್ಯಾಂಕ್‌ಗೆ ಮಾಹಿತಿ ನೀಡಿ, ಸಂಬಂಧಪಟ್ಟ ಸೈಬರ್ ಕ್ರೈಂ ವಿಭಾಗ ಅಥವಾ ಪೊಲೀಸರಿಗೆ ದೂರು ನೀಡಬೇಕು ಎಂದು ಸಾರ್ವಜನಿಕರಿಗೆ ಈಗಾಗಲೇ ಎಚ್ಚರಿಕೆ ಸೂಚನೆ ನೀಡಲಾಗಿದೆ.

    Post Views: 12

    CrimeNews dakshina kannada

    Related Posts

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026

    ಎಂಡಿಎಂಎ, ಕೊಕೇನ್ ಸಾಗಾಟ: ಬಂಟ್ವಾಳದಲ್ಲಿ ಆರೋಪಿಯ ಬಂಧನ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ₹750 ವಂಚನೆಗೆ ಯತ್ನ; ನಕಲಿ ವಿಡಿಯೋ ವಿರುದ್ಧ ಪೊಲೀಸರಿಗೆ ದೂರು

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.