Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಅಪ್ರಾಪ್ತೆಯ‌ ಮಾನಭಂಗಕ್ಕೆ ಯತ್ನ- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಅಪ್ರಾಪ್ತೆಯ‌ ಮಾನಭಂಗಕ್ಕೆ ಯತ್ನ- ಆರೋಪಿ ಬಂಧನ

    March 12, 2025
    Share

    ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಿಟಿ ರೋಡ್ ವಿದ್ಯಾಗಿರಿ ಶಾಲೆಯ ಪಕ್ಕ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿದ್ದಾರೆ.


    ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯ ನಿವಾಸಿ ರಾಜು ಅವರ ಪುತ್ರ, ಪವನ್ ಕುಮಾರ್ ಬಂಧಿತ ಆರೋಪಿ. ಈತ ಮಾ.8ರಂದು ಸಾಯಂಕಾಲ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಬಳಿ, ಜನತಾ ನಗರದಲ್ಲಿ ಟ್ಯೂಶನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ.

    ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಂಡು ಸೈಕಲ್ ಅಲ್ಲೇ ಬಿಟ್ಟು, ಮನೆಗೆ ಓಡಿ ಹೋಗಿ ತಪ್ಪಿಸಿಕೊಂಡಿದ್ದಾಳೆ. ತಕ್ಷಣ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ.

    ಮೂಡುಬಿದಿರೆ ಅಸುಪಾಸಿನಲ್ಲಿ ಇತ್ತೀಚೆಗೆ ಇಂತದಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿವಿಧ ಮೂಲಗಳಿಂದ ಈತನ ಕುರಿತು ಮಾಹಿತಿ ಸಂಗ್ರಹಿಸಿದ ಪೊಲೀಸರು ಮಂಗಳವಾರ ಅಲಂಗಾರು ಬಳಿ ಈತನನ್ನು ಬಂಧಿಸಿದ್ದಾರೆ.

    ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ಅಖಿಲ್ ಅಹಮದ್, ನಾಗರಾಜ್ ಲಂಬಾಣಿ, ಮೊಹಮ್ಮದ್ ಹುಸೇನ್, ಮೊಹಮ್ಮದ್ ಇಕ್ಬಾಲ್ ಕಾರ್ಯಾಚರಣೆ ನಡೆಸಿದರು. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ.

    Post Views: 196

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.