ಕಾಸರಗೋಡು : ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿ ದಿವ್ಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಪತಿ ರಾಜೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ದಿವ್ಯಶ್ರೀ ಹಾಗೂ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು .ಇದರಿಂದ ಕೆಲ ದಿನಗಳಿಂದ ಇಬ್ಬರೂ ಬೇರ್ಪಟ್ಟು ವಾಸವಾಗಿದ್ದರು ಎನ್ನಲಾಗಿದೆ. ಸಂಜೆಯ ವೇಳೆ ತಲವಾರು ಹಿಡಿದುಕೊಂಡು ಬಂದ ರಾಜೇಶ್ ದಿವ್ಯಶ್ರೀ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಮುಖ ಹಾಗೂ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು. ಈ ವೇಳೆ ತಡೆಯಲು ಬಂದ ತಂದೆಗೂ ಗಾಯ ಗಳಾಗಿವೆ. ಬೊಬ್ಬೆ ಕೇಳಿ ಪರಿಸರ ವಾಸಿಗಳು ಬಂದಿದ್ದು, ಈ ವೇಳೆ ರಾಜೇಶ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ ದಿವ್ಯಶ್ರೀ ಅವರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವೈದ್ಯರು…
Author: main-admin
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯಯೋರ್ವ ವಸತಿ ನಿಲಯದ ಕಿಟಕಿಗಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಗಳೂರು ಸಮೀಪದ ಹೊಸೂರು ನಿವಾಸಿ ಶಶಾಂಕ್ (20) ಎಂದು ಗುರುತಿಸಲಾಗಿದೆ. ಶಶಾಂಕ್ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾರ್ಥಿಯಾಗಿದ್ದನು. ಈತ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಡೆಡ್‌ಲೈನ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೆ. ಕಾಮೇಶ್ವರ ರಾವ್ ಮತ್ತು ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ, HSRP ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 5ರ ರಿಯಾಯಿತಿ ನೀಡಿ ಮತ್ತೊಂದು ಡೆಡ್‌ಲೈನ್ ನೀಡಿದೆ. ನಿರ್ದಿಷ್ಟ ಉತ್ಪಾದಕರು ಮಾತ್ರ ಪೂರೈಸಬೇಕು ಮತ್ತು ನಿರ್ದಿಷ್ಟ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಇದೇ ವೇಳೆ ಮುಂದೂಡಲಾಗಿದೆ. ವಾಹನ ತಯಾರಿಸುವ ಮೂಲ ಸಾಧನಗಳ ಉತ್ಪಾದಕರು ಅನುಮತಿಸಿರುವ ಲೈಸನ್ಸ್ ಹೊಂದಿರುವ ಅತಿ ಸುರಕ್ಷಿತ ನಂಬರ್ ಪ್ಲೇಟ್‌ಗಳನ್ನು ಉತ್ಪಾದಕರು ಮಾತ್ರ ಎಚ್‌ಎಸ್‌ಆರ್ ಪ್ಲೇಟ್‌ಗಳನ್ನು ಹಳೆಯ ವಾಹನಗಳಿಗೆ ಪೂರೈಸಬೇಕು. ಈ ಫಲಕಗಳನ್ನು ವಾಹನ ಉತ್ಪಾದಕರು ಅನುಮತಿ ನೀಡುವ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ನಿಯಮ ರೂಪಿಸಲಾಗಿತ್ತು. ಹಳೆಯ ವಾಹನಗಳಿಗೆ ಆಗಸ್ಟ್, 2024ರ ಒಳಗೆ ನೂತನ ನಂಬರ್ ಪ್ಲೇಟ್ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ…
ಮಂಗಳೂರು : ಕಳೆದ ಕೆಲ ದಿನದಿಂದ ಡ್ರೀಮ್ ಡೀಲ್ಸ್ ಗ್ರೂಪ್ನ ಸಿಬ್ಬಂದಿಗಳು ಬಿಡುಗಡೆ ಮಾಡುತ್ತಿರುವ ಲಕ್ಕಿ ಡ್ರಾ ವೇಳೆ ಹಿಂಬದಿ ಇರುವ ಸಿಬ್ಬಂದಿ ತನ್ನ ಕಿಸೆಯಿಂದ ತಮಗೆ ಬೇಕಾದ ಲಕ್ಕಿ ಡ್ರಾ ಕಾಯಿನ್ ಅನ್ನು ಕಣ್ಣಿಗೆ ಬಟ್ಟೆಕಟ್ಟಿದ ವ್ಯಕ್ತಿಗೆ ಕೊಡುವ ಚಿತ್ರಣ ವೈರಲ್ ಆಗಿದ್ದು ಈ ಬಗ್ಗೆ ಡ್ರೀಮ್ ಡೀಲ್ ಗ್ರೂಪ್ ನ ಆಡಳಿತ ವರ್ಗ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಕರೆದಿದ್ದು ಈ ಕೃತ್ಯದಲ್ಲಿ ಕಾಣದ ಕೈಗಳ ಕೈವಾಡವಿದೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದ್ದು ಈ ಕೃತ್ಯದಲ್ಲಿ ಭಾಗಿಯಾದವರ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.ನಿನ್ನೆ ಲಕ್ಕಿ ಡ್ರಾ ಸಂದರ್ಭದಲ್ಲಿ ಉಬೈದ್ ಮತ್ತು ಹರ್ಷಿತ್ ಅನ್ನುವ ನಮ್ಮ ಕೆಲಸದವರು ಸಂಸ್ಥೆಗೆ ಮೋಸ ಮಾಡಿದ್ದಾರೆ. ಇದು ಗಮನಕ್ಕೆ ಬಂದ ತಕ್ಷಣವೇ ಮರು ಡ್ರಾ ಮಾಡಿದ್ದೇವೆ. ಬಳಿಕ ಅವರ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಕಂಪೆನಿ ಮುಂದೆಯೂ ಜನರ ವಿಶ್ವಾಸಕ್ಕೆ ಬದ್ಧವಾಗಿದೆ. ಪೊಲೀಸ್…
ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ. ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್‌ಐಆರ್ ದಾಖಲಾಗಿದೆ.…
ಮಂಗಳೂರು : ನಗರದ ಮರೋಳಿಯ ಕೆಂಬಾರ್‌ನ ಹೆದ್ದಾರಿ ಬದಿಯಲ್ಲಿ ಕಾಂಚನ ಟಿ.ವಿ.ಎಸ್. ಆಟೋ ರಿಕ್ಷಾ ವರ್ಕ್ ಶಾಪ್‌ನ ಲಾಕರ್ ನಲ್ಲಿದ್ದ 93,540 ರೂ. ಹಣವನ್ನು ಕಳ್ಳರು ಕಳವು ಮಾಡಿದ್ದಾರೆ. ಸಂಸ್ಥೆಯ ವರ್ಕ್ಸ್ ಮ್ಯಾನೇಜರ್ ನ. 19ರಂದು ವರ್ಕ್ ಶಾಪ್‌ನಲ್ಲಿ ಆ ದಿನ ಸಂಗ್ರಹವಾದ 93,540 ರೂ. ಹಣವನ್ನು ಆಟೋ ರಿಕ್ಷಾದ ಬಿಡಿಭಾಗಗಳನ್ನು ಇಡುವ ಕೋಣೆಯ ಟೇಬಲ್‌ನಲ್ಲಿರುವ ಮಿನಿ ಲಾಕರ್‌ನಲ್ಲಿ ಇಟ್ಟು ಡ್ರಾವರ್ ಲಾಕ್ ಮಾಡಿದ್ದಾರೆ. ನ. 20ರಂದು ಬೆಳಗ್ಗೆ 6.50ರ ವೇಳೆ ಸೆಕ್ಯೂರಿಟಿ ಗಾರ್ಡ್ ಮ್ಯಾನೇಜರ್ ಗೆ ಕರೆ ಮಾಡಿ ವರ್ಕ್ ಶಾಪ್‌ನಲ್ಲಿ ಕಳವಾಗಿರುವ ಬಗ್ಗೆ ತಿಳಿಸಿದ್ದಾರೆ. ಮ್ಯಾನೇಜರ್ ಕೂಡಲೇ ವರ್ಕ್ ಶಾಪ್‌ಗೆ ಬಂದು ನೋಡಿದಾಗ ಹಿಂಬಾಗಿಲನ್ನು ಯಾವುದೋ ಆಯುಧವನ್ನು ಬಳಸಿ ಜಖಂಗೊಳಿಸಿ ಕಳ್ಳರು ಒಳ ಪ್ರವೇಶಿಸಿರುವುದು ಕಂಡುಬಂದಿದೆ. ಅಲ್ಲಿಂದ ನೇರವಾಗಿ ಬಿಡಿ ಭಾಗಗಳ ಕೋಣೆಯ ಬಾಗಿಲನ್ನು ತೆರೆದು ಡಾವರ್‌ನ ಲಾಕರನ್ನು ಯಾವುದೋ ಆಯುಧವನ್ನು ಉಪಯೋಗಿಸಿ ಬಲವಂತದಿಂದ ತೆರೆದು ಅದರಲ್ಲಿದ್ದ ನಗದು 93,540 ರೂ. ಹಾಗೂ ಲಾಕರ್ ಅನ್ನು ಕಳ್ಳತನ ಮಾಡಿದ್ದಾರೆ.…
ಉಡುಪಿ : ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಎಂಬಾತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದು, ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಯ ಹಾಲ್‌ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಕಪಾಟಿನಲ್ಲಿದ್ದ ಲಾಕರ್‌ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ 31,17,100 ರೂ. ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಸಿದ್ದಪ್ಪ ಕಳವು ಮಾಡಿಕೊಂಡು ಹೋಗಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತ ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ 30 ಲಕ್ಷ ರೂ. ಮೌಲ್ಯದ 374.45 ಗ್ರಾಂ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ : ಶಾಲಾ ಮಕ್ಕಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಕಾಡಾನೆ ಎದುರುಗೊಂಡ ಹಿನ್ನಲೆ ಅಪಾಯ ತಪ್ಪಿಸಲು ಹೋಗಿ ಮೂವರು ಗಾಯಗೊಂಡು ಮನೆ ಸೇರಿದ ಘಟನೆ ನ.21 ರ ಮುಂಜಾನೆ ಶಿಶಿಲ ಗ್ರಾಮದಿಂದ ವರದಿಯಾಗಿದೆ. ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡಿದೆ, ಭಯದಿಂದ ತನ್ನ ಬೈಕನ್ನು ನಿಲ್ಲಿಸಿದಾಗ ಬೈಕಿಂದ ಬಿದ್ದ ಸವಾರ ಮತ್ತು ಅವರ ಇಬ್ಬರು ಮಕ್ಕಳ ಮೊಣಕಾಲು ಮತ್ತು ಕೈ ಗಳಿಗೆ ಗಾಯಗಳಾಗಿವೆ.
ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ. ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬ ಪ್ರಶ್ನಿಸಿ ಬುಧವಾರ ದಿನ ಮುಂಜಾನೆ ವೇಳೆ ಹೊಡೆದಿರುವುದಾಗಿ ಆರೋಪಿಸಲಾಗಿದೆ. ರಾಮಕುಂಜದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಎಂಬವರು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪ ವ್ಯಕ್ತಪಡಿಸಿದ್ದಾರೆ. ತಡ ರಾತ್ರಿ ಕಡಬ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವ ಸಂದರ್ಭದಲ್ಲಿ ಉಪನ್ಯಾಸಕನೂ ಆಗಮಿಸಿದ್ದು , ಸ್ಥಳದಲ್ಲಿದ್ದ ಯುವಕರ ಗುಂಫು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯೊಳಗೆ ಕೆಲ ಹೊತ್ತು ಭಾರಿ ಮಾತಿನ ಚಕಮಕಿ ನಡೆದಿತ್ತು.ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಯುವಕರಿಗೆ ಆಸ್ಪತ್ರೆಯಿಂದ ಹೊರ ಹೋಗುವಂತೆ ಸೂಚಿಸಿದ್ದರು.
ಉಡುಪಿ: ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಂಭವಿಸಿದೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಮನೆಯ ರೂಮ್‌ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನವೆಂಬರ್ 17ರಂದು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.