Author: main-admin

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು ಯಶೋಧಾ ದಂಪತಿಯ ಪುತ್ರ ಶಮಿಕ್ ರೈ (20) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಶಮಿಕ್ ಅವರು ಪುತ್ತೂರಿನ ಖಾಸಗಿ ಕಾಲೇಜ್‌ನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಸಿಎ ಪರೀಕ್ಷೆಗೂ ಸಿದ್ಧತೆ ನಡೆಸುತ್ತಿದ್ದರು. ಕಳೆದ ಹಲವು ಸಮಯದಿಂದ ಶಮಿಕ್ ಜಿಮ್‌ಗೆ ಹೋಗುತ್ತಿದ್ದು, ಎಂದಿನಂತೆ ಶನಿವಾರವೂ ಜಿಮ್‌ಗೆ ತೆರಳಿದ್ದು ಅಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ತಕ್ಷಣವೇ ಆತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿದ್ದು, ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ. ಓರ್ವ ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Read More

ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್‌ಸಿ ಮಧು ಹಾಗೂ ಸಿಪಿಸಿ ಭೀಮನಗೌಡ ಎಂ. ಬಿರಾದರ್ ಅವರು ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಂದ ದೂರಿನ ಮೇರೆಗೆ ಪಡ್ನೂರು ಗ್ರಾಮದ ಮುಂಡಾಜೆ ಎಂಬಲ್ಲಿಗೆ ತೆರಳಿದ್ದರು.ಅಲ್ಲಿ ಮಹಿಳೆಯೊಬ್ಬರು ತನ್ನ ಪತಿ ಹಲ್ಲೆ ನಡೆಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತು ಆಕೆಯ ಪತಿ ನವೀನ್ ಬಳಿ ವಿಚಾರಿಸಿದಾಗ, ಆತ ಕೋಪಗೊಂಡು ಪತ್ನಿಗೆ ಮತ್ತೆ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಮುಂದಾದ ಪೊಲೀಸ್ ಸಿಬ್ಬಂದಿಗೆ ನವೀನ್, ಆತನ ತಾಯಿ ಹಾಗೂ ಸಹೋದರ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 107/2026ರಂತೆ ಬಿಎನ್‌ಎಸ್‌ 2023ರ…

Read More

ಮಂಗಳೂರು : ರಾಜ್ಯ ಮಾನ್ಯತೆ ಪಡೆದಿರುವ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಶುಕ್ರವಾರ ಕಂಬಳದ ಮಹಾಪೋಷಕ ಹಾಗೂ ಕಂಬಳ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ನಿಯೋಗ ಸಿಎಂ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ರಾಜ್ಯದಲ್ಲಿ ನಡೆಯುವ 27 ಕಂಬಳಗಳ ಆಯೋಜನೆಗೆ ₹5 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಹಾಗೂ ಈ ಕುರಿತು ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ನಿಯೋಗ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ಅವರು ಅನುದಾನ ನೀಡುವ ಭರವಸೆ ನೀಡಿದರು.

Read More

ಮಂಗಳೂರು : ಅಷ್ಟಮಿ ಪ್ರಯುಕ್ತ ಹಳೆಯಂಗಡಿ, ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ ವೇಳೆ ಶ್ರೀನಾಥ್ ಅವರು ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

Read More

ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಮದ್ಯಪಾನದ ವೇಳೆ ನಡೆದ ಜಗಳವೇ ಸಾವಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ಇದನ್ನು ಕೊಲೆ ಪ್ರಕರಣವೆಂದು ಶಂಕಿಸಿದ್ದಾರೆ. ದಿನ ಕೂಲಿ ಕೆಲಸ ಮುಗಿಸಿ ಕ್ವಾರ್ಟರ್ಸ್‌ಗೆ ಹಿಂದಿರುಗಿದ ಇತರ ಕಾರ್ಮಿಕರು ರಮೇಶ್ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಮೇಶ್ ಅವರು ಆ ಕ್ವಾರ್ಟರ್ಸ್‌ನಲ್ಲಿ ಶಾಶ್ವತವಾಗಿ ವಾಸಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳದಿಂದ ಇಬ್ಬರು ವ್ಯಕ್ತಿಗಳು ಪರಾರಿಯಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಮಂಜೇಶ್ವರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಹಾಗೂ ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ…

Read More

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ. ಕೇರಳ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ.ದೇವಸ್ಥಾನದ ಆಡಳಿತ ಪದಾಧಿಕಾರಿ ಬೆಟ್ಟಂಪಾಡಿ ನಿವಾಸಿ ವಿನೋದ್ ಕುಮಾರ ಬಿ. (44) ಅವರು ನೀಡಿದ ದೂರಿನಂತೆ, ಆ.24ರಂದು ರಾತ್ರಿ ದೇವಸ್ಥಾನದ ಹೊರಗಡೆ ಇಟ್ಟಿದ್ದ ಕಾಣಿಕೆ ಡಬ್ಬಿಯನ್ನು ಅಪರಿಚಿತ ವ್ಯಕ್ತಿ ಕಳವು ಮಾಡಿದ್ದ. ಆ.25ರಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದಾಗ ಡಬ್ಬಿ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಡಬ್ಬಿಯನ್ನು ಎತ್ತಿಕೊಂಡು ಹೋಗುತ್ತಿರುವುದು ಪತ್ತೆಯಾಗಿತ್ತು.ಕಾಣಿಕೆ ಡಬ್ಬಿಯಲ್ಲಿ ಸುಮಾರು ₹4,500 ಹಣ ಇದ್ದಿರಬಹುದೆಂದು ಅಂದಾಜಿಸಲಾಗಿದ್ದು, ಡಬ್ಬಿಯ ಮೌಲ್ಯ ಸುಮಾರು ₹2,500 ಆಗಿತ್ತು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 110/2026, ಕಲಂ 305(e) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ತನಿಖಾ ತಂಡ ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಸೇರಿದಂತೆ ವಿವಿಧ…

Read More

ಮೂಡುಬಿದಿರೆ: ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.30ರಂದು ಮೂಡುಬಿದಿರೆ ಕನ್ನಡ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಡಿ. ಶೆಟ್ಟಿ ಅವರು ಸ್ವಾಗತಿಸಿ, ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಅಭಿವೃದ್ಧಿಗೆ ಕಾರಣರಾದ ಎಲ್ಲಾ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅವರು, 2025-26ನೇ ಸಾಲಿನಲ್ಲಿ ಸಂಘವು 81.68 ಕೋಟಿ ರೂ. ವಹಿವಾಟು ನಡೆಸಿ, 57.09 ಲಕ್ಷ ರೂ. ಲಾಭ ಗಳಿಸಿದೆ ಎಂದು ತಿಳಿಸಿದರು. ಪ್ರಸ್ತುತ ಸಂಘವು 33.47 ಲಕ್ಷ ರೂ. ಪಾಲು ಬಂಡವಾಳ, 3,608 ಸದಸ್ಯರು, 10.99 ಕೋಟಿ ರೂ. ಠೇವಣಿ ಹಾಗೂ 8.76 ಕೋಟಿ ರೂ. ಸಾಲ ವಿತರಣೆ ಹೊಂದಿದೆ. ಸಾಲ ವಸೂಲಾತಿ ಪ್ರಮಾಣ ಶೇ.98.94 ಆಗಿದ್ದು, ಈ ಸಾಲಿನಲ್ಲಿಯೂ ಸಂಘವು ಆಡಿಟ್ ವರ್ಗೀಕರಣದಲ್ಲಿ ‘A’ ದರ್ಜೆ ಪಡೆದಿದೆ. ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ ಎಂದು…

Read More

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಮೀಪ ಬೊಲೆರೋ ಪಿಕಪ್ ವಾಹನ ಹಾಗೂ ಮೂವರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡು ಅವರು ಪರಾರಿಯಾಗಲು ಯತ್ನಿಸಿದಾಗ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಮತ್ತು ಮುತ್ತು (28) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ಕ್ಯಾನ್‌ನಲ್ಲಿ ತುಂಬಿಸಲಾಗಿದ್ದ ಸುಮಾರು 20 ಲೀಟರ್ ಡೀಸೆಲ್, ಖಾಲಿ ಕ್ಯಾನ್‌ಗಳು, ಡೀಸೆಲ್ ಕಳವಿಗೆ ಬಳಸುತ್ತಿದ್ದ…

Read More

ಬಂಟ್ವಾಳ: ಕರ್ತವ್ಯದಲ್ಲಿ ಲೋಪ, ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಉದ್ಧಟತನ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅರುಣ್ ಚೌಹಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ತವ್ಯ ನಿರ್ವಹಣೆಯಲ್ಲಿ ಅಗತ್ಯ ಎಚ್ಚರಿಕೆ ಹಾಗೂ ಜವಾಬ್ದಾರಿಯನ್ನು ವಹಿಸದಿರುವುದು, ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿರುವುದು ಹಾಗೂ ಮೇಲಾಧಿಕಾರಿಯೊಂದಿಗೆ ಶಿಸ್ತುಬದ್ಧವಲ್ಲದ ರೀತಿಯಲ್ಲಿ ವರ್ತಿಸಿರುವ ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಮಾನತು ಆದೇಶದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ನಿಯಮಾನುಸಾರ ಮುಂದಿನ ಕ್ರಮ ಹಾಗೂ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಆರೋಪಗಳು ಇಲಾಖಾ ವಿಚಾರಣೆಯಲ್ಲಿ ಸಾಬೀತಾಗುವವರೆಗೆ ಅವುಗಳನ್ನು ಆರೋಪಗಳೆಂದೇ ಪರಿಗಣಿಸಬೇಕಾಗಿದೆ.

Read More

ಉಡುಪಿ: ನಕಲಿ ಹಣಕಾಸು ಸಂಸ್ಥೆಯ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ. ಕೆಳಾರ್ಕಳಬೆಟ್ಟುವಿನ 65 ವರ್ಷದ ಶ್ರೀನಿವಾಸ ಆಚಾರ್ಯ ಅವರು ಚಿನ್ನದ ಕೆಲಸ ಮಾಡಿಕೊಂಡಿದ್ದು, ಮೇ 21ರಂದು ಸುಮಾರು 83.1 ಗ್ರಾಂ ಚಿನ್ನವನ್ನು ಸುವಿಧಾ ಫೈನಾನ್ಸ್‌ ಅಂಡ್ ಇನ್‌ವೆಸ್ಟ್‌ಮೆಂಟ್‌ನಲ್ಲಿ ಅಡಮಾನ ಇಟ್ಟಿದ್ದರು. ಫೈನಾನ್ಸ್‌ನಲ್ಲಿ ಬಡ್ಡಿ ಹೆಚ್ಚಿರುವುದನ್ನು ಗಮನಿಸಿದ ಅವರ ಪುತ್ರ ಶ್ರೀಕಾಂತ, ಪರಿಚಯದ ಆನಂದ ನಾಯ್ಕ್‌ ಎಂಬವರ ಮೂಲಕ ಮಂಜುನಾಥ ಪೂಜಾರಿ ಎಂಬಾತನನ್ನು ಪರಿಚಯಿಸಿದ್ದ ಎನ್ನಲಾಗಿದೆ. ಮಂಜುನಾಥ ಪೂಜಾರಿ ಹಣ ನೀಡಿ ಸುವಿಧಾ ಫೈನಾನ್ಸ್‌ನಲ್ಲಿದ್ದ ಚಿನ್ನವನ್ನು ಬಿಡಿಸಿಕೊಂಡು, ಶ್ರೀನಿವಾಸ ಆಚಾರ್ಯರನ್ನು ಇಂಡಿಯನ್ ಓವರ್ಸೀಸ್ ಬ್ಯಾಂಕ್‌ಗೆ ಕರೆದುಕೊಂಡು ಹೋಗಿ ಖಾತೆ ತೆರೆಯಿಸಿ, ಚಿನ್ನಾಭರಣದ ಫೋಟೋ ತೆಗೆಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಜುಲೈ 21, 2026ರ ದಿನಾಂಕ ಹೊಂದಿರುವ ಕೃಷ್ಣ ಫೈನಾನ್ಸ್‌ ಲಿಮಿಟೆಡ್‌ನ ನಕಲಿ ರಶೀದಿಯನ್ನು ನೀಡಿದ್ದಾನೆ ಎನ್ನಲಾಗಿದೆ. ಚಿನ್ನವನ್ನು ವಾಪಸ್ ಪಡೆಯಲು ಆರೋಪಿತನಿಗೆ ಕರೆ ಮಾಡಿದಾಗ ಆತ ಕರೆ ಸ್ವೀಕರಿಸಿರಲಿಲ್ಲ. ರಶೀದಿಯಲ್ಲಿ ನಮೂದಿಸಿರುವ…

Read More