Author: main-admin

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು ಮೂವರು ಸುಪಾರಿ ಹಂತಕರಿಗೆ ವರ್ಗಾಯಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಂತಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ, ತಮ್ಮನ್ನು ಆಗಸ್ಟ್ 10ರಂದೇ ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕಿಶೋರ್ ಪೂಜಾರಿ ಪರ ವಾದ ಮಂಡಿಸಿದ ವಕೀಲರು, ಕಿಶೋರ್ ಅವರು ಅನಾರೋಗ್ಯದಿಂದ…

Read More

ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶವನ್ನು ಸರ್ಕಾರ ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಈ ಕಠಿಣ ನಿರ್ಧಾರದಿಂದ ರಾಜ್ಯದ ಅಡಕೆ ಬೆಳೆಗಾರರಿಗಾಗಲಿ ಅಥವಾ ಅಡಕೆ ಮಾರುಕಟ್ಟೆಗಾಗಲಿ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದ್ದಾರೆ. ಗುಟ್ಕಾ ತಯಾರಿಕೆಯಲ್ಲಿ ಸ್ಥಳೀಯ ಅಡಕೆಯ ಬದಲಾಗಿ ನೆಪಾಳ, ಬಾಂಗ್ಲಾದೇಶಗಳಿಂದ ಆಮದು ಮಾಡಿಕೊಂಡ ಕಳಪೆ ಅಡಕೆಯನ್ನೇ ಹೆಚ್ಚಾಗಿ ಬಳಸಲಾಗುತ್ತಿತ್ತು. ಈಗ ನಿಕೋಟಿನ್ ಮತ್ತು ತಂಬಾಕಿನ ಮೇಲಿನ ನಿರ್ಬಂಧದಿಂದಾಗಿ ಶುದ್ಧ ಅಡಕೆಗೆ ಬೇಡಿಕೆ ಹೆಚ್ಚಾಗಿ, ಬೆಲೆಯೂ ವೃದ್ಧಿಯಾಗುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಿದರು. ಈ ಹಿಂದೆ ಗುಟ್ಕಾ ನಿಷೇಧದ ಸಂದರ್ಭದಲ್ಲೂ ಬೆಲೆ ಕುಸಿಯಲಿದೆ ಎಂದು ಆತಂಕ ವ್ಯಕ್ತವಾಗಿತ್ತು. ಆದರೆ ಕೇವಲ ಮೂರು ತಿಂಗಳ ಅವಧಿಯಲ್ಲಿ ಅಡಕೆ ಧಾರಣೆ ಏರಿಕೆಯಾಗಿತ್ತು. ಹೀಗಾಗಿ ಬೆಳೆಗಾರರು ಕನಿಷ್ಠ ಮೂರು ತಿಂಗಳು ಕಾದು ನೋಡಿದರೆ ಸರ್ಕಾರದ…

Read More

ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ದಶಕದಲ್ಲಿ ಭಾರತವು ಕೊರೊನಾ ಸಾಂಕ್ರಾಮಿಕ ರೋಗ, ಅಂತಾರಾಷ್ಟ್ರೀಯ ಯುದ್ಧಗಳು ಮತ್ತು ಅಗತ್ಯ ವಸ್ತುಗಳ ಅಭಾವದಂತಹ ಸಾಲು ಸಾಲು ಸವಾಲುಗಳನ್ನು ಎದುರಿಸಿದ್ದರೂ, ಮುನ್ನೆಚ್ಚರಿಕೆ ಹಾಗೂ ನಿಖರ ಯೋಜನೆಯಿಂದ ಅವುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತಿದೆ ಎಂದು ಹೇಳಿದರು. ಇತ್ತೀಚಿನ ವರ್ಷಗಳಲ್ಲೇ ಪ್ರಧಾನಿ ಮೋದಿ ಸುದೀರ್ಘ ಭಾಷಣಕ್ಕೆ ಬ್ರೇಕ್: ಕೆಂಪುಕೋಟೆಯಲ್ಲಿ 78 ನಿಮಿಷಗಳಲ್ಲೇ ಮುಗಿದ ಮಾತು!ಕೊರೊನಾ ಸಾಂಕ್ರಾಮಿಕವು ಇಡೀ ಜಗತ್ತನ್ನು ಅನಿಶ್ಚಿತತೆಗೆ ತಳ್ಳಿ, ಜಾಗತಿಕ ವ್ಯವಸ್ಥೆಗಳನ್ನೇ ಬುಡಮೇಲು ಮಾಡಿತ್ತು. ವಿಶ್ವದ ದೇಶಗಳು ಆ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುತ್ತಿದ್ದಂತೆಯೇ ಉಕ್ರೇನ್ ಹಾಗೂ ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿದ ಯುದ್ಧಗಳು ಮತ್ತಷ್ಟು ಹೊಸ ಸವಾಲುಗಳನ್ನು ತಂದೊಡ್ಡಿದವು ಎಂದು ಪ್ರಧಾನಿ ಸ್ಮರಿಸಿದರು. ಇಂತಹ ಬಿಕ್ಕಟ್ಟಿನ ಸಮಯದಲ್ಲೂ ಕೆಲವರು ಭಾರತೀಯರಲ್ಲಿ ಭಯ ಮತ್ತು ಆತಂಕವನ್ನು ಸೃಷ್ಟಿಸಿ, ದುರಂತದ ಭವಿಷ್ಯ ನುಡಿಯುವ ಮೂಲಕ ಆನಂದಪಡುತ್ತಿದ್ದರು ಎಂದು ಪ್ರಧಾನಿ ಮೋದಿ ವಿರೋಧಿಗಳ ವಿರುದ್ಧ ವಾಗ್ದಾಳಿ…

Read More

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಸರಕಾರ ಆದೇಶ ಹೊರಡಸಿದೆ. ರಾಜ್ಯಪಾಲರ ಆದೇಶಾನುಸಾರ, ಮುಖ್ಯಮಂತ್ರಿಗಳಿಂದ ಅನುಮೋದಿಸಲ್ಪಟ್ಟು, ಸರಕಾರದ ಅಧೀನ ಕಾರ್ಯದರ್ಶಿಯವರು ಪ್ರಕಟಿಸಿದ ಪಟ್ಟಿಯಂತೆ ಉಡುಪಿಗೆ ರಿಜ್ವಾನ್ ಅರ್ಷದ್, ದಕ್ಷಿಣ ಕನ್ನಡಕ್ಕೆ ಯು.ಟಿ. ಖಾದರ್, ಬೆಂಗಳೂರು ನಗರಕ್ಕೆ ಕೃಷ್ಣಬೈರೇಗೌಡ, ಚಿಕ್ಕಮಗಳೂರಿಗೆ ಕೆ.ಜೆ. ಜಾರ್ಜ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. 

Read More

ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಪಶ್ಚಿಮ ವಲಯ ಐಜಿಪಿ ಅವರ ಆದೇಶ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಐದು ಪ್ರಕರಣಗಳು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ದಾಖಲಾಗಿರುವ…

Read More

ಬೆಳ್ತಂಗಡಿ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಸಿ.ಸಿ. ಸಂಖ್ಯೆ: 535/2016 ರಂತೆ ವಾರಂಟು ಆರೋಪಿಯನ್ನು ಬಂಧಿಸಲಾಯತು. ಅಗಸ್ಟ್‌ 13 2026 ರಂದು ವೇಣೂರು ಠಾಣಾ ಸಿಬ್ಬಂದಿಗಳಾದ ಎ ಎಸ್ ಐ ಬೆಣ್ಣಿಚನ್ ,ಪಿಸಿ ಬಸವರಾಜ್ ಮತ್ತು ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಮ್ ರವರುಗಳ ತಂಡ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ ತೆರಳುವ ವೇಳೆ ಆರೋಪಿಯು ನಿರಂತರವಾಗಿ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿಯ ಮನೆಯವರು ಎಚ್ಚರಿಕೆ ನೀಡಿದರೂ ಆತ ತನ್ನ ವರ್ತನೆ ಮುಂದುವರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜುಲೈ 29ರಂದು ಯುವತಿ ಕಾಲೇಜಿನಿಂದ ಮನೆಗೆ ಬರುತ್ತಿದ್ದ ವೇಳೆ ಆರೋಪಿ ಮತ್ತೆ ಆಕೆಯನ್ನು ಹಿಂಬಾಲಿಸಿ, ಯುವತಿಯ ತಾಯಿ ಹಾಗೂ ಅಕ್ಕನಿಗೆ ಕೇಳಿಸುವಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಳಿಕ ಆಗಸ್ಟ್ 10ರಂದು ಮತ್ತೆ ಯುವತಿಯನ್ನು ಹಿಂಬಾಲಿಸಿ, ಆಕೆಯ ಅಕ್ಕನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.ಈ ಕುರಿತು ಯುವತಿ ಆಗಸ್ಟ್ 11ರಂದು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು BNS ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ…

Read More

ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್‌ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಬಂಟ್ವಾಳ ಕಾವಳಪಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ ಐದು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಅಡ್ಯಾರ್ ಮಂಗಳೂರಿನ ನಾಶೀರ್ ಹುಸೇನ್ (37), ಗೋಳ್ತಮಜಲಿನ ಮಹಮ್ಮದ್ ಜುನೈದ್ (38) ಹಾಗೂ ಕಂಕನಾಡಿಯ ಮೊಹಮ್ಮದ್ ಅಫ್ರೀದಿ (24) ಎಂದು ಗುರುತಿಸಲಾಗಿದೆ.ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C) ಜೊತೆಗೆ 22(C) ಅಡಿಯಲ್ಲಿ ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ…

Read More

ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯುವಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಅಪಾರ ಸಂಖ್ಯೆಯ ಯುವಕರ ಪ್ರೀತಿಗೆ ಪಾತ್ರರಾಗಿದ್ದರು. ಧರ್ಮೇಂದ್ರ ಶೆಟ್ಟಿ ಅವರು ಈ ಹಿಂದೆ ದೂರದ ಬಹರೈನ್‌ನಲ್ಲಿ ಕೂಡ ವ್ಯವಹಾರ ನಡೆಸುತ್ತಿದ್ದರು. ಬಳಿಕ ಅನಾರೋಗ್ಯದ ಕಾರಣದಿಂದ ತಾಯ್ನಾಡಿಗೆ ಮರಳಿದ್ದರು ಎಂದು ತಿಳಿದುಬಂದಿದೆ.

Read More

ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ ಸಿಪಿಐ ಪಕ್ಷದ ಸ್ಥಳೀಯ ಮಟ್ಟದ ನಾಯಕನಾಗಿದ್ದು, ದರೋಡೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ತನಿಖೆ ಚುರುಕುಗೊಂಡ ಬೆನ್ನಲ್ಲೇ ಶ್ರೀರಾಗ್ ವಕೀಲರ ಮೂಲಕ ಮಂಗಳೂರಿಗೆ ಬಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಮಿಥುನ್, ಉಬೇದ್ ಮತ್ತು ಜಿಯಾದ್ ಕೂಡ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದರು. ಈ ವೇಳೆ ಮಿಥುನ್‌ನನ್ನು ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ಬಂಧಿಸಲಾಗಿದ್ದು, ಉಬೇದ್ ಮತ್ತು ಜಿಯಾದ್ ಪಡೀಲ್‌ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಇನೋವಾ ಹಾಗೂ ಸ್ವಿಫ್ಟ್ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ 10 ಗ್ರಾಂ ತೂಕದ…

Read More