ಮಂಗಳೂರು : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತಪಟ್ಟ ಕೈದಿ. 2022ರ ಡಿಸೆಂಬರ್ ಸಂದರ್ಭ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೊಣಾಜೆ ಪೊಲೀಸರಿಂದ ಅರೆಸ್ಟ್ ಆಗಿದ್ದ. ಆ ಬಳಿಕದಿಂದ ಆತ ಮಂಗಳೂರು ಜೈಲಿನಲ್ಲೇ ಇದ್ದನು. ಆತನಿಗೆ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಜೈಲಿನಲ್ಲಿ ಈತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಎಪ್ರಿಲ್ 25ರಂದು ದಾಖಲಿಸಲಾಗಿತ್ತು. ಮೇ 6ರಂದು ನಸುಕಿನ ವೇಳೆ 4ಗಂಟೆಗೆ ಬೆಡ್ ಶೀಟನ್ನೇ ಕಿಟಕಿಗೆ ಕಟ್ಟಿ ಅದನ್ನು ಕುಣಿಕೆಯಾಗಿಸಿ ಕೊರಳೊಡ್ಡಿದ್ದಾನೆ. ಅದೇ ಕೊಠಡಿಯಲ್ಲಿ ಇತರ ನಾಲ್ವರು ಕೈದಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಹೊರಗಡೆ ಕಾವಲಿಗೆ ಪೊಲೀಸರಿದ್ದರು. ಅದರ ನಡುವೆಯೂ ಈತ ಸಾವಿಗೆ ಶರಣಾಗಿದ್ದಾನೆ.
Author: main-admin
ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್ ನೌಕರರು ಮೇ 6 ರ ರಾತ್ರಿ 8 ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 108 ಆ್ಯಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡ ಜಿವಿಕೆ ಸಂಸ್ಥೆಯು 2023ರ ಡಿಸೆಂಬರ್‌ನಿಂದ ಎಪ್ರಿಲ್ ವರೆಗಿನ ವೇತನವನ್ನು ಬಾಕಿ ಇರಿಸಿಕೊಂಡಿದೆ. ಈ ನಡುವೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದಾಗ ಡಿಸೆಂಬರ್ ಹಾಗೂ ಜನವರಿ ತಿಂಗಳಿನ ಒಟ್ಟು ಮೊತ್ತದ ಅರ್ಧದಷ್ಟು ವೇತನ ಪಾವತಿಸಿದೆ. ಇನ್ನೂ 3 ತಿಂಗಳ ಪೂರ್ಣ ವೇತನ ಬಾಕಿಯಿದೆ ಎಂದು 108 ಆ್ಯಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ಪರಮಶಿವಯ್ಯ ತಿಳಿಸಿದರು. ವೇತನವನ್ನು ನಂಬಿರುವ ನೌಕರರು ಸಂಕಷ್ಟಕ್ಕೀಡಾಗಿದ್ದಾರೆ. ಸಾಕಷ್ಟು ಬಾರಿ ವೇತನ ಬಿಡುಗಡೆ ಮಾಡಲು ಸಂಸ್ಥೆಗೆ ಮನವಿ ಮಾಡಿದ್ದೇವೆ. ಆದರೂ ಮನವಿಗೆ ಸ್ಪಂದಿಸಿಲ್ಲ. ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ಆ್ಯಂಬುಲೆನ್ಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಪ್ರಯತ್ನಿಸಿದ್ದರು. ಇಂಥ ಘಟನೆ ರಾಜ್ಯಾದ್ಯಂತ ಸಂಭವಿಸುತ್ತಿದೆ ಎಂದು ಆಂತಕ ವ್ಯಕ್ತಪಡಿಸಿದರು. ಸೋಮವಾರ ರಾತ್ರಿ 8…
ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದಿದ್ದಾರೆ. ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 )ಮೃತ ದುರ್ದೈವಿ ಬಾಲಕಿಯರು.ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂಬ ಕೂಗು ಕೇಳಿ ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್.ಡಿ.ರೇವಣ್ಣ ಮತ್ತು ಅವರ ವಕೀಲರು ಲೈಂಗಿಕ ದೌರ್ಜನ್ಯದ ವಿಡಿಯೋ ತುಣುಕುಗಳ ತನಿಖೆಗಾಗಿ ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶರಣಾಗುವಂತೆ ಪ್ರಜ್ವಲ್ ಗೆ ಸಲಹೆ ನೀಡಿದ್ದರು ಎಂದು ವರದಿಯಾಗಿದೆ.
ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ. ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಏನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂ ಎಸ್ ಪಿ ಕಾನೂನು ಜಾರಿಗೊಳಿಸುವುದಾಗಿ ನಾವು ಭರವಸೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದು, ಈ ವೇಳೆ ಸಿದ್ದರಾಮಯ್ಯ ಮಾತನಾಡಿ,ಮೋದಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ.ಆದರೆ ರೈತರ ಸಾಲ ಮನ್ನಾ ಮಾಡಿಲ್ಲ ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಷೀನ್ ಇಲ್ಲ ಅಂದಿದ್ದರು. ವಿಧಾನಮಂಡಲದಲ್ಲಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿದ್ದರು. ಇದು ರೈತರ ಬಗ್ಗೆ ಬಿಜೆಪಿಗಿರುವ ಮನಸ್ಥಿತಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು. ದೇಶದ ಪ್ರಧಾನಿಯಾಗಿ ಮೋದಿ ಈ ರೀತಿ ಹೇಳಿಕೆ ನೀಡಬಾರದು. ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಂವಿಧಾನದ ಮೇಲೆ ಯಾವಾಗಲೂ…
ಬೆಳ್ತಂಗಡಿ: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿಯ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ. ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು ಆಗಮಿಸುವ ವೇಳೆ ವಿಜಯ್ ಬರದಿರುವುದನ್ನು ಕಂಡ ದೇವಸ್ಥಾನದ ಸಿಬ್ಬಂದಿ ಹಾಗೂ ಭಕ್ತರು ಅವರು ತಂಗುತ್ತಿದ್ದ ವಸತಿಗೃಹಕ್ಕೆ ವಿಚಾರಿಸಲು ತೆರಳಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ವಿಜಯ್ ಅವರ ಬಾಣಂತಿ ಪತ್ನಿಯು ಅವರ ತಾಯಿ ಮನೆಯಲ್ಲಿದ್ದರು. ಪತ್ನಿ ಮನೆಯವರು ಬಂದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು ಅವರು ತೊಕ್ಕೊಟ್ಟುವಿನಿಂದ ದೇರಳಕಟ್ಟೆ ಕಡೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದೆ. ವಿದ್ಯುತ್ ಕಂಬಕ್ಕೆ ಹಾನಿಯಾದ ಹಿನ್ನಲೆ ವಿದ್ಯುತ್ ಕಟ್ ಸಮಸ್ಯೆಯಾಗಿದ್ದು, ವಿದ್ಯುತ್ ಕಂಬ ಬದಲಾವಣೆ ಕಾರ್ಯ ಆರಂಭಿಸಲಾಗಿದೆ.
ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಹುಡೋ ಕಾಲನಿಯ ತ್ರೇಸಿಯಮ್ಮ (57) ಎಂಬವರ ಮೊಬೈಲ್‌ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ಕರೆ ಮಾಡಿದಾತ ತಾನು ಕೆನರಾ ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ತ್ರೇಸಿಯಮ್ಮ ಅವರ ಬಳಿ ಖಾತೆ ನಂಬರ್, ಕಸ್ಟಮರ್ ಐಡಿ, ಆಧಾರ್ ನಂಬರ್, ಡೇಟ್ ಆಫ್ ಬರ್ತ್ ಇತ್ಯಾದಿ ವಿವರಗಳನ್ನು ಕೇಳಿದ್ದಾನೆ. ಆ ವ್ಯಕ್ತಿಯ ಮಾತನ್ನು ನಂಬಿದ ಅವರು ಆತ ಕೇಳಿದ ಎಲ್ಲಾ ವಿವರಗಳನ್ನು ನೀಡಿದ್ದಾರೆ. ನಂತರ ಮೊಬೈಲ್‌ಗೆ ಬಂದ ಓಟಿಪಿ ನಂಬರ್ ಮತ್ತು ನಾಮಿನಿ ವಿವರವನ್ನು ಕೂಡ ಅವರು ನೀಡಿದ್ದರು. ಬಳಿಕ ಆ ವ್ಯಕ್ತಿ ತ್ರೇಸಿಯಮ್ಮ ಹಾಗೂ ಅವರ ಗಂಡನ ಖಾತೆಯಿಂದ ಒಟ್ಟು 3,91,563ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ.