ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ (ಎಸ್ ಐಟಿ) ಅಧಿಕಾರಿಗಳು ಇಂದು ಸಂಜೆ ವಶಕ್ಕೆ ಪಡೆದು ಬಂಧಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಅಧಿಕಾರಿಗಳು ಅವರನ್ನು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಇದರ ಬೆನ್ನಲ್ಲೇ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
Author: main-admin
ಮಂಗಳೂರು: ಮಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಇ-ಮೇಲ್ ಉಗ್ರರ ಹೆಸರಲ್ಲಿ ಬಂದಿದ್ದು, ”ವಿಮಾನ ನಿಲ್ದಾಣದ ಆವರಣದಲ್ಲಿ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ. ಏಪ್ರಿಲ್ 29 ರಂದು ಬೆದರಿಕೆಯ ಇ-ಮೇಲ್ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂದೇಶ ಬಂದು ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬೆದರಿಕೆ ಸಂದೇಶದ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ನಗರದ ಕಂಟ್ರಾಕ್ಟರ್ ದಾರೊಬ್ಬರಿಗೆ ಸಿಬಿಐ ಅಧಿಕಾರಿಯ ಸೋಗಿನಲ್ಲಿ ಅಪರಿಚಿತರು ಫೋನ್ ಕರೆ ಮಾಡಿ ಬರೋಬ್ಬರಿ 15 ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಲಪಟಾಯಿಸಿದ್ದಾನೆ ಎಂದು ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಟ್ಟಾರ ನಿವಾಸಿ 65 ವರ್ಷದ ಕಂಟ್ರಾಕ್ಟರ್ ಒಬ್ಬರಿಗೆ ಎಪ್ರಿಲ್ 25ರಂದು ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿದೆ. ಆತ “ತಮ್ಮ ಮೊಬೈಲ್ ನಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಹಣದ ವ್ಯವಹಾರ ನಡೆಯುತ್ತಿರುವ ಬಗ್ಗೆ ಹೇಳಿದ್ದು, ಮೊಬೈಲ್ ಸಂಖ್ಯೆಯನ್ನು ಅಮಾನತು ಮಾಡಬೇಕಾಗುತ್ತದೆ. ನಿಮ್ಮ ಮೇಲೆ ಮುಂಬೈ ಸಿಬಿಐ ಕಚೇರಿಯಲ್ಲಿ ಕೇಸ್ ದಾಖಲಾಗಿದೆ ಎಂದು ಹೇಳಿದ್ದಾನೆ. ಬಳಿಕ, ಕರೆಯನ್ನು ಸಿಬಿಐ ಅಧಿಕಾರಿಗೆ ವರ್ಗಾಯಿಸುತ್ತೇನೆಂದು ಹೇಳಿ ಮತ್ತೊಬ್ಬ ವ್ಯಕ್ತಿ ಮಾತನಾಡಿದ್ದಾರೆ. ಸಿಬಿಐ ಅಧಿಕಾರಿಯ ಹೆಸರಲ್ಲಿ ಮಾತನಾಡಿದ್ದ ವ್ಯಕ್ತಿ, ನಿಮ್ಮ ಬ್ಯಾಂಕ್ ಖಾತೆಯಿಂದ ಹಣದ ಅವ್ಯವಹಾರ ಆಗಿದ್ದು ಖಾತೆಯನ್ನು ಮುಟ್ಟುಗೋಲು ಹಾಕಲಾಗುತ್ತದೆ ಎಂದಿದ್ದಾನೆ. ಆದ್ದರಿಂದ ನಿಮ್ಮ ಎಲ್ಲಾ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಬೇರೆ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು. ಅಲ್ಲದೆ, ಸೈಪ್ ಏಪ್ ಅನ್ನು ಡೌನ್ಲೋಡ್…
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ನಡೆದ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಹಾಗಾಗಿ ನೀರನ್ನು ಯಾರೂ ಅನಗತ್ಯವಾಗಿ ಪೋಲು ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೋಲು ಮಾಡದೇ ಸದ್ಭಳಕೆ ಮಾಡಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಪರಿಹರಿಸಲು ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿದೆ. ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.…
ಮಂಗಳೂರು: ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೇ. 21 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಟಿತ ಶಾಲಾ ವಿವರ:ಮಂಗಳೂರಿನ ಕೊಡಿಯಾಲ್‍ಬೈಲ್ ನಲ್ಲಿರುವ ಶಾರದಾ ವಿದ್ಯಾಲಯ, ಬಂಟ್ವಾಳ ತಾಲೂಕಿನ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯಲ್ಲಿರುವ ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ವಿಟ್ಲದ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆಯಲ್ಲಿರುವ ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಡಂತ್ಯಾರುವಿನ ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗಗಳು. ಅರ್ಹತೆ ಹಾಗೂ ಷರತ್ತುಗಳು:ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. (ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು), ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳಿಗೆ ಮೀರಿರಬಾರದು. (2023-24ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), ಜನನ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು. 2 ಪಾಸ್‍ಪೋರ್ಟ್ ಸೈಜ್…
ಮಂಗಳೂರು: ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್ ಮಾಲ್ ನಿಂದ ಏ.28 ರಂದು ಕಾಣೆಯಾಗಿರುತ್ತಾರೆ. ಈ ಬಗ್ಗೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾಣೆ ಪ್ರಕರಣ ದಾಖಲಾಗಿರುತ್ತದೆ. ಸಫಾನ ರವರಿಗೆ ಇಬ್ಬರು ಮಕ್ಕಳಿದ್ದು ಸಫಾನ ರವರ ವಯಸ್ಸು:-27 ವರ್ಷ , 4.5 ಅಡಿ ಎತ್ತರ, ಬಿಳಿ ಮೈಬಣ್ಣ, ಹಾಗೂ ಕಪ್ಪು ಬಣ್ಣದ ಬುರ್ಖಾ ಧರಿಸಿರುತ್ತಾರೆ ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ.. ಚಹರೆವುಳ್ಳ ಮಹಿಳೆಯು ಎಲ್ಲಿಯಾದರೂ ಕಂಡು ಬಂದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಬೇಕಾಗಿ ಕೋರಿಕೆ. ಸಂಪರ್ಕಿಸಬೇಕಾದ ಮೊಬೈಲ್ ನಂಬ್ರ: 9480805338,9480802321,0824-2220516
ಅಜೆಕಾರು: ಸೆಖೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸಿನಲ್ಲಿ ಮಲಗಿದ್ದ ಎಣ್ಣೆಹೊಳೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅಜೆಕಾರು ಬೊಂಡುಕುಮೇರಿ ಆಶ್ರಯ ನಗರ ನಿವಾಸಿ ಸುಂದರ್ ನಾಯ್ಕ (55) ಮೃತ ಶಿಕ್ಷಕ. ಅವರು ರಾತ್ರಿ ಸುಮಾರು 10.30ರ ವೇಳೆಗೆ ಟೆರೇಸಿನಲ್ಲಿ ಮಲಗಿದ್ದರು. ಬೆಳಗ್ಗೆ 6.30ರ ವೇಳೆಗೆ ಮನೆಯವರು ನೋಡುವಾಗ ಕೆಳಗೆ ಬಿದ್ದು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಗಾಢ ನಿದ್ರೆಯಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ, ಪುತ್ರಿಯರನ್ನು ಅಗಲಿದ್ದಾರೆ.
ಮಂಗಳೂರು: ಕೋವಿಡ್-ಲಾಕ್‌ಡೌನ್ ಹಿನ್ನೆಲೆಯಲ್ಲಿ 2020ರಲ್ಲಿ ರದ್ದಾಗಿದ್ದ ಲಕ್ಷದ್ವೀಪ-ಮಂಗಳೂರು ಪ್ರಯಾಣಿಕರ ಹಡಗು ನಾಲ್ಕು ವರ್ಷದ ಬಳಿಕ ಗುರುವಾರ ಸಂಜೆ ನಗರದ ಹಳೆಯ ಬಂದರಿಗೆ ಆಗಮಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಲಕ್ಷದ್ವೀಪದ ಕದ್ಮತ್ ದ್ವೀಪದಿಂದ ಪ್ರಯಾಣ ಆರಂಭಿಸಿದ ಕೊಚ್ಚಿಯ ‘ಪರೊಲಿ’ ಎಂಬ ಹೆಸರಿನ ಹಡಗು ಅಲ್ಲಿನ ಮತ್ತೊಂದು ದ್ವೀಪಕ್ಕೆ ತಲುಪಿದೆ. ಬಳಿಕ ಅಲ್ಲಿಂದ 8:15ಕ್ಕೆ ಪ್ರಯಾಣ ಆರಂಭಿಸಿದ ಹಡಗು ಸಂಜೆ 4ಕ್ಕೆ ಮಂಗಳೂರು ಬಂದರು ಹೊರವಲಯಕ್ಕೆ ತಲುಪಿ ಲಂಗರು ಹಾಕಿತು. ಹಳೆಯ ಬಂದರ್‌ನಲ್ಲಿ ಹಡಗೊಂದು ಸರಕು ತುಂಬಿಸಿಕೊಳ್ಳುತ್ತಿದ್ದ ಕಾರಣ ಮಂಗಳೂರು ಹಳೆಯ ಬಂದರು ಪ್ರವೇಶಿಸಲು ‘ಪರೊಲಿ’ ಹಡಗು ಸಂಜೆ 4:30ರ ತನಕ ಕಾಯಬೇಕಾಯಿತು. ಕೊನೆಗೂ ಸಂಜೆ ಸುಮಾರು 4:45ಕ್ಕೆ ಹಳೆಯ ಬಂದರು ತಲುಪಿದೆ. ಈ ಹಡಗು ಶನಿವಾರ ಮುಂಜಾನೆ ಮರಳಿ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ.
ನವದೆಹಲಿ: ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಇಂಡಿಯನ್ ಆಯಿಲ್ ಸ್ಪಷ್ಟಪಡಿಸಿದೆ. ಕಡುಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್, ಡೀಸೆಲ್ ಹಾಕಿಸಬೇಡಿ ಎಂದು ವಾಹನ ಸವಾರರಿಗೆ ಇಂಡಿಯನ್ ಆಯಿಲ್ ಕಂಪನಿ ಎಚ್ಚರಿಕೆ ನೀಡಿದೆ ಎಂಬ ಸುದ್ದಿ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ಕಂಪನಿ ಸ್ಪಷ್ಟೀಕರಣ ನೀಡಿದೆ. ಆಟೋಮೊಬೈಲ್ ತಯಾರಕರು ಕಾರ್ಯಕ್ಷಮತೆಯ ಅಗತ್ಯತೆ ಮತ್ತು ಅಂತರ್ನಿರ್ಮಿತ ಸುರಕ್ಷತಾ ಅಂಶಗಳೊಂದಿಗೆ ಸುತ್ತುವರಿದ ಪರಿಸ್ಥಿತಿಗಳ ಎಲ್ಲಾ ಅಂಶಗಳನ್ನು ಪರಿಗಣಿಸಿ ವಾಹನಗಳನ್ನು ವಿನ್ಯಾಸಗೊಳಿಸುತ್ತಾರೆ. ಪೆಟ್ರೋಲ್/ಡೀಸೆಲ್ ವಾಹನಗಳಿಗೆ ಇಂಧನ ಟ್ಯಾಂಕ್‌ನಲ್ಲಿ ಸೂಚಿಸಲಾದ ಗರಿಷ್ಠ ಪರಿಮಾಣವು ಇದಕ್ಕೆ ಹೊರತಾಗಿಲ್ಲ. ಆದ್ದರಿಂದ ಚಳಿಗಾಲ ಅಥವಾ ಬೇಸಿಗೆಗಾಲ ಯಾವುದೇ ಆಗಲಿ ನಿರ್ದಿಷ್ಟಪಡಿಸಿದ ಗರಿಷ್ಠ ಮಿತಿಯವರೆಗೆ ವಾಹನಗಳಲ್ಲಿ ಇಂಧನ ತುಂಬುವುದು ಸಂಪೂರ್ಣ ಸುರಕ್ಷಿತ ಎಂದು ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೆಟ್ರೋಲ್ ಡೀಲರ್ಸ್ ಅಸೋಸಿಯೇಶನ್ ಪುಣೆ (ಪಿಡಿಎಪಿ) ಅಧ್ಯಕ್ಷ ಧ್ರುವ್ ರೂಪಾರೆಲ್ ಅವರು, ಬೇಸಿಗೆಯಲ್ಲಿ ಫುಲ್ ಟ್ಯಾಂಕ್ ಪೆಟ್ರೋಲ್,…
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಅಪಘಾತದಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ರೋಗಿಯೋರ್ವರನ್ನು ಕೊಂಡೊಯ್ಯಲಾಗುತ್ತಿತ್ತು. ಆ್ಯಂಬುಲೆನ್ಸ್ ಗೆ ಕಬಕದ ಶಾಲಾ ರಸ್ತೆಯಿಂದ ನೇರವಾಗಿ ಮುಖ್ಯರಸ್ತೆಗೆ ಬಂದ ನ್ಯಾನೊ ಡಿಕ್ಕಿಯಾಗಿದೆ. ಇದೇ ಸಂದರ್ಭ ಮಂಗಳೂರು ಕಡೆಯಿಂದ ಬಂದ ಮತ್ತೊಂದು ಕಾರು ನ್ಯಾನೋಗೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೋಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.